ಬಳ್ಳಾರಿ,ಡಿ.26
ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಬಳ್ಳಾರಿ (ಗ್ರಾ), ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 25 ಅಂಗನವಾಡಿ ಕಾರ್ಯಕರ್ತೆಯರು ಮತ್ತು 58 ಸಹಾಯಕಿಯರ ಗೌರವಸೇವೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅಪೂರ್ಣವಾದ ಅರ್ಜಿಗಳನ್ನು ಪುನಃ ಭರ್ತಿ ಮಾಡಲು ಜ.05 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 04 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ ಒಂದನೇ ಹಂತದಲ್ಲಿಯೇ “ಅಪ್ಲಿಕೇಶನ್ ಸಕ್ಸೆಸ್‌ಫುಲ್ ಅಪ್‌ಲೋಡೆಡ್” ಎಂಬ ಮೆಸೇಜ್ ಮೊಬೈಲ್ ಸಂಖ್ಯೆಗಳಿಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ.
ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 304 ಅಪೂರ್ಣ ಅರ್ಜಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ 111 ಅಪೂರ್ಣ ಅರ್ಜಿ, ಕುರುಗೋಡು ತಾಲ್ಲೂಕು ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 190 ಹಾಗೂ ಸಹಾಯಕಿಯರ ಹುದ್ದೆಗಳಿಗೆ 128, ಕಂಪ್ಲಿ ತಾಲ್ಲೂಕು ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 31, ಸಹಾಯಕಿಯರ ಹುದ್ದೆಗಳಿಗೆ 07 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತವೆ. ಅಪೂರ್ಣ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಆಯಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಜ.05 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್: https://karnemakaone.kar.nic.in/abcd/ ನಲ್ಲಿ ಪೂರ್ಣಗೊಳಿಸಲು ಕಾಲಾವಕಾಶ ನೀಡಲಾಗಿದೆ.
01 ನೇ ಹಂತ: ಆನ್‌ಲೈನ್ ತಂತ್ರಾAಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬುವುದು.
02 ನೇ ಹಂತ: ತಮ್ಮ ಭಾವಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡುವುದು.
03 ನೇ ಹಂತ: ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು.
04 ನೇ ಹಂತ: ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.
ವಿಶೇಷ ಸೂಚನೆ: ಅರ್ಜಿ ಆಹ್ವಾನಿಸಿದ ಅಧಿಸೂಚನೆಯ ಕೊನೆಯ ದಿನಾಂಕದೊಳಗೆ ಪಡೆಯಲಾದ ದಾಖಲಾತಿಗಳನ್ನು ಮಾತ್ರ ಪರಿಗಣಿಸಲಾಗುವುದು. ಮುಂದುವರೆದು ವಿಸ್ತರಣಾ ದಿನಾಂಕದಲ್ಲಿ ಪಡೆದ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ಅಥವಾ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———–