Ad image

ಕನ್ನಡ ಸಾಹಿತ್ಯ ಕುರಿತು ಪತ್ರಕರ್ತರಿಗೆ 3 ದಿನಗಳ ತರಬೇತಿ ಶಿಬಿರಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಧಾರವಾಡ  ಜು. 07: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ, ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಜುಲೈ 25, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಟ್ಸೈಟ್ https://sahithyaacademy.karnataka.gov.in ಮೂಲಕ ಪಡೆಯಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
error: Content is protected !!
";