ಚಿತ್ರದುರ್ಗಜೂ.18:
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ವತಿಯಿಂದ 2025ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ, ಆನ್ಲೈನ್ ಮೂಲಕ https://awards.gov.in ವೆಬ್ಸೈಟ್ನಲ್ಲಿ 2025ರ ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ವೆಬ್ಸೈಟ್ನಲ್ಲಿ ಪಡೆಯಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.