Ad image

ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Vijayanagara Vani
ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ವಿಜಯನಗರ(ಹೊಸಪೇಟೆ), ಜೂ.23 : 2025-26ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ರಾಜ್ಯ ವಲಯ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಗಳು:- ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಯೋಜನೆಯಡಿ ಸಹಾಯಧನ ನೆರವು, ಮೀನುಮರಿ ಖರೀದಿಸಲು ನೆರವು ಯೋಜನೆ, ಕೆರೆ, ಜಲಾಶಯಗಳ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ನೆರವು. ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕಿನ ಮೀನುಗಾರಿಕೆ ಇಲಾಖಾ ಕಚೇರಿಗಳಿಗೆ ಜುಲೈ.15 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹರಪನಹಳ್ಳಿಯ ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ ಅವರ ಮೊ. 8217725319, ಹೊಸಪೇಟೆ ಮತ್ತು ಹಡಗಲಿಯ ಮೀನುಗಾರಿಕೆ ಸಹಾಯಕ ನಿರ್ದೇಶಕ ಶಾಂತಕುಮಾರ್ ಅವರ ಮೊ.9620177588 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";