ಬೆಂಗಳೂರು, ಜೂನ್, 18: ಇದೀಗ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆಯೇ ಇದೀಗ ದರ್ಶನ್ ಫಾರ್ಮ್‌ಹೌಸ್ ಮ್ಯಾನೇಜರ್ ಆಗಿದ್ದ ಶ್ರೀಧರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ.
ಆನೇಕಲ್ ಬಳಿಯ ನಟ ದರ್ಶನ್‌ಮ ಫಾರ್ಮ್ ಹೌಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಧರ್ ಎಂಬಾತನ ಶವ ಪತ್ತೆಯಾಗಿದೆ. ಶ್ರೀಧರ್ ವಿಷ ಸೇವೆನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲದೆ, ನನ್ನ ಆತ್ಮಹತ್ಯಗೆ ಯಾರು ಕಾರಣ ಅಲ್ಲ ಅಂತಲೂ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ಫಾರ್ಮ್‌ಹೌಸ್ ಪಕ್ಕದಲ್ಲೇ ಶವ ಸಿಕ್ಕಿರುವುದು ಇನ್ನೂ ಅನುಮಾನ ಜಾಸ್ತಿ ಆಗುವಂತೆ ಮಾಡಿದೆ.
ನಟ ದರ್ಶನ್ ಫಾರ್ಮ್ ಹೌಸ್ ಮ್ಯಾನೇಜರ್ ಶ್ರೀಧರ್ (35) ವಿಷ ಸೇವಿಸಿ ಏಪ್ರಿಲ್ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಈ ಘಟನೆ ಏಪ್ರಿಲ್‌ನಲ್ಲಿ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಶ್ರೀಧರ್ ಎಂಬುವವರು ನಟ ದರ್ಶನ್ ಅವರಿಗೆ ಒಂದು ವರ್ಷ ಮ್ಯಾನೇಜರ್ ಆಗಿದ್ದರು ಎಂದು ತಿಳಿದುಬಂದಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದಾರೆ ಅಂತಳು ಹೇಳಲಾಗುತ್ತಿದೆ. ಆದರೆ ಮತ್ತೊಂದೆಡೆ ಖಿನ್ನತೆಯಿಂದ ರಕ್ತಕಾರಿ ಸಾವಪ್ಪಿದ್ದಾರೆ ಎನ್ನುವ ಮಾಹಿತಿಯೂ ಲಭ್ಯವಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಇನ್ನು ಇದೀಗ ಪೊಲೀಸರು ಈ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇಂದು (ಜೂನ್ 18) ಸ್ಥಳ ಮಹಜರಿಗಾಗಿ ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಬಂದಿದ್ದಾರೆ.
ದರ್ಶನ್ ಚಿತ್ರದ ಸಿ.ಡಿ. ಸುಟ್ಟು ಆಕ್ರೋಶ: ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರನಟ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಚಾಮರಾಜನಗರದಲ್ಲಿ ಮಠಾಧೀಶರ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಹರವೆ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರ ವಿರಕ್ತ ಮಠದ ಸ್ವಾಮೀಜಿ, ಮರಿಯಾಲ ಮಠದ ಶ್ರೀಗಳ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದರು. ಭುವನೇಶ್ವರಿ ವೃತ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ರಚಿಸಿ ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ದರ್ಶನ್ ನಟನೆಯ ಸಿನಿಮಾ ಸಿಡಿಗಳು, ಪೋಸ್ಟರ್ ಗಳನ್ನು ಸುಟ್ಟು ಆಕ್ರೊಶ ಹೊರಹಾಕಿದರು
ಈ ನಡುವೆ ಪೊಲೀಸರು ಮಧ್ಯ ಪ್ರವೇಶ ಮಾಡಿದ್ದರಿಂದ ಕೆಲಕಾಲ ಪ್ರತಿಭಟನಾಕಾರರು ಹಾಗೂ ಖಾಕಿ ನಡುವೆ ಜಟಾಪಟಿ ನಡೆಯಿತು. ಬಳಿಕ, ಜಿಲ್ಲಾಡಳಿತ ಭನವನದ ತನಕ ಮೆರವಣಿಗೆಯಲ್ಲಿ ತೆರಳಿ ನಟನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ದರ್ಶನ್ ಟೀಂಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು.