ಶಿವಮೊಗ್ಗ, ಮೇ -29 :: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಕೊಡಮಾಡುತ್ತಿದ್ದು, ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಶಿಕ್ಷಣ, ನಾಗರೀಕ ಸೇವೆ, ಕ್ರೀಡೆ ಅಥ್ಲೇಟಿಕ್, ಸಾಹಸ ಕ್ರೀಡೆ, ಪರಿಸರ ಸಂರಕ್ಷಣೆ, ವನ್ಯಮೃಗ ಸಂರಕ್ಷಣೆ ಮುಂತಾದವುಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಸಾಧಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ತಮ್ಮ ಸ್ವ-ವಿವರಗಳೊಂದಿಗೆ ತಮ್ಮ ಸಾಧನೆಯ ದಾಖಲೆಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಸಿದ್ಧಪಡಿಸಿ [email protected] ಹಾಗೂ [email protected] ಇ-ಮೇಲ್ ವಿಳಾಸಕ್ಕೆ ಜೂನ್ 15 ರೊಳಗಾಗಿ ಕಳುಹಿಸುವಂತೆ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.