ಬಳ್ಳಾರಿ,ಫೆ.14
ನಗರದ ಹಿರಿಯಾಳಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಮುಖ್ಯ ಗುರುಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈಗ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು ಅಂತರ್ ಜಾಲದಲ್ಲಿ (ಆನ್‌ಲೈನ್) WWW.vidyavahini.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನ ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕುರುಗೋಡು ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮಾನ್ವಯಾಧಿಕಾರಿಗಳ ಕಚೇರಿ ಮತ್ತು ಕುರುಗೋಡು ಆದರ್ಶ ವಿದ್ಯಾಲಯ ಶಾಲೆಯ ಮುಖ್ಯಗುರುಗಳ ಕಚೇರಿ ಅಥವಾ ಮೊ.9740738762 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ