ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Vijayanagara Vani
ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಡಿಕೇರಿ ಜೂ.26ಪ್ರಸಕ್ತ (2024-25) ಸಾಲಿಗೆ ಮಡಿಕೇರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ, 15 ಕೊನೆಯ ದಿನವಾಗಿದೆ. ಶೇ.75 ಸ್ಥಾನಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಉಳಿದ ಶೇ. 25 ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿನಿಲಯದ ವಾರದ 07 ದಿನಗಳಲ್ಲಿ ಪೌಷ್ಟಿಕಯುಕ್ತ ಉಪಹಾರ ಹಾಗೂ ಊಟದ ವ್ಯವಸ್ಥೆ, ಉಚಿತ ವಸತಿ, ಲೇಖನ ಸಾಮಾಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಣೆ, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನಾ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್, ಬಾಲಕಿಯರಿಗೆ ಒನಕೆ ಓಬವ್ವ ಆತ್ಮ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://sw.kar.nic.in ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ ((SATS ID ಯೊಂದಿಗೆ) ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬಂಧಿಸಿದ ನಿಯಗಳ ವಾರ್ಡನ್ರವರಿಗೆ ಸಲ್ಲಿಸಬೇಕು.
ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಮಡಿಕೇರಿ ದೂರವಾಣಿ ಸಂಖ್ಯೆ: 8904589086, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮಡಿಕೇರಿ ದೂರವಾಣಿ ಸಂಖ್ಯೆ: 8310074686, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಚೇರಂಬಾಣೆ ದೂರವಾಣಿ ಸಂಖ್ಯೆ: 9480629711 ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ 9480843155 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!