ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Vijayanagara Vani
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ‘ಹೊಯ್ಸಳ’ ಮತ್ತು ‘ಕೆಳದಿ ಚೆನ್ನಮ್ಮ’ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.
ಈ ಪ್ರಶಸ್ತಿಗೆ ಆಯ್ಕೆ ಆಗುವಂತಹ ಮಕ್ಕಳು ಸೂಚಿತ ಕ್ಷೇತ್ರಗಳಲ್ಲಿ ಅಪ್ರತಿಮ ಪ್ರತಿಭೆ ಉಳ್ಳವರಾಗಿದ್ದು, ಅವರು ಸಾಧಿಸಿದ ಪ್ರತಿಭೆಯ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಮಕ್ಕಳು ಕನಿಷ್ಠ 5 ವರ್ಷ ಕರ್ನಾಟಕ ರಾಜ್ಯದಲ್ಲಿ ನೆಲಸಿರಬೇಕು, ಈ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸುವುದು. ರಾಷ್ಟç/ರಾಜ್ಯ/ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿರುವ ಪ್ರಶಸ್ತಿ ಪಡೆದಿರುವ ಪತ್ರ ಸಲ್ಲಿಸುವುದು. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪ್ರಮಾಣೀಕರಿಸಿರಬೇಕು ಹಾಗೂ ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 21 ರೊಳಗೆ ಈ ಕಚೇರಿಗೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.
WhatsApp Group Join Now
Telegram Group Join Now
Share This Article
error: Content is protected !!