ಚಿತ್ರದುರ್ಗ
ಮುಂಬರುವ ಅಕ್ಟೋಬರ್ 12 ತಾರೀಕಿನ ಶನಿವಾರ ವಿಜಯದಶಮಿ ದಿನದಂದು ಮಹಾರಾಷ್ಟçದ ನಾಗಪುರ ದೀಕ್ಷಾ ಭೂಮಿಯಲ್ಲಿ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ತೆರಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 15 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಪ್ರತಿ ವರ್ಷದಂತೆ ಅಕ್ಟೋಬರ್ 10 ರಿಂದ 14ರವರೆಗೆ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ತೆರಳಲು ಸಾರಿಗೆ ವ್ಯವಸ್ಥೆ, ರೈಲಿನ ವ್ಯವಸ್ಥೆ ಕಲ್ಪಿಸುವ ಸಂಬoದ, ರಾಜ್ಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಆಯ್ಕೆ ಮಾಡಲಾಗುವುದು. ಯಾತ್ರಿಗಳು ಬಿ.ಪಿ.ಎಲ್.ಕಾರ್ಡ ಹೊಂದಿರಬೇಕು. ಎಸ್.ಟಿ, ಎಸ್.ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಅಂಬೇಡ್ಕರ್ ಅನುಯಾಯಿಗಳು ಅಹ ಯಾತ್ರೆ ಕೈಗೊಳ್ಳಬಹುದು. ಯಾತ್ರಾತ್ರಿಗಳು ಕನಿಷ್ಠ 18 ವರ್ಷ ಮೇಲ್ಪಟವರಾಗಿರಬೇಕು. ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ. ಸರ್ಕಾರಿ ಮತ್ತು ಅದರ ಅಂಗಸAಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು. ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು.
ಆಸಕ್ತ ಯಾತ್ರಾರ್ಥಿಗಳು https://swdservice.karnataka.gov.in ತಂತ್ರಾ0ಶದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇರ್ಶಕರು ತಿಳಿಸಿದ್ದಾರೆ.