“ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ”

Vijayanagara Vani
“ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ”
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22,- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಈ ಕೋರ್ಸ್ ಗಳಿಗೆ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನವಾಗಿದ್ದು, ಆನ್ಲೈನ್ ಮೂಲಕ https://ssp.postmatric.karnataka.gov.in/ ಈ ವೆಬ್ ಸೈಟ್ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ- https://bcwd.karnataka.gov.in ಇಲಾಖಾ ಸಹಾಯವಾಣಿ ಸಂಖ್ಯೆ:8050770005 ಇಮೇಲ್: [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected] ಸಹಾಯವಾಣಿ ಸಂಖ್ಯೆ: 1902 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!