ದಾವಣಗೆರೆ ಜು.08 ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ ಮೂಲಕ ಆಹ್ವಾನಿಸಲಾಗಿದೆ.
ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್,
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ:08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ : 08192-250066 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಶ್ರದ್ದೆಯಿಂದ ಅಭ್ಯಾಸಿಸಿ ಜೀವನ ರೂಪಿಸಿಕೊಳ್ಳಲು ಸಲಹೆ
ವಿದ್ಯಾರ್ಥಿಗಳು ತಮ್ಮ ಪೆಷಕರಿಗೆ ಹಾಗೂ ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡಲು ಶ್ರದ್ಧೆಯಿಂದ ವಿದ್ಯಾಭ್ಯಾಸ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬೂದಿಹಾಳ್ ರಸ್ತೆಯಲ್ಲಿ ನಿರ್ಮಿಸಿರುವ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತಾನಾಡಿದರು. ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಒಂದು ಉತ್ತಮವಾದ ಕಾಲಘಟ್ಟ, ಇದನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಹಾಗೂ ಶಿಕ್ಷಣದ ಜೊತೆ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್ ಇತರ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಇದೆ ವೇಳೆ ವಿದ್ಯಾರ್ಥಿಗಳ ಕುಂದುಕೊರೆತಗಳ ಆಲಿಸಿ, ನಿಮಗೆ ಏನಾದರೂ ಸಮಸ್ಯೆ ಬಂದರೆ ಧೈರ್ಯವಾಗಿ ನನ್ನ ಬಳಿ ಬಂದು ಚರ್ಚೆ ಮಾಡಿ ಎಂದು ತಿಳಿಸಿದರು.
ಜಿಲ್ಲಾ ಪೆÇಲೀಸ್ ವರಿ ಉಮಾ ಪ್ರಶಾಂತ್ ಮಾತನಾಡಿ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರೆಡೆಗೆ ತಮ್ಮ ಗಮನ ಹರಿಸದೇ ಓದುವ ಕಡೆ ಮಾತ್ರ ಇರಬೇಕೆಂದರು. ಇತ್ತೀಚೆಗೆ ವಿದ್ಯಾರ್ಥಿಗಳು ಟಿವಿ. ಮೊಬೈಲ್ ನೋಡುವುದರಲ್ಲಿ ಹೆಚ್ಚಿನ ಸಮಯ ವ್ಯಯಮಾಡುವ ಮೂಲಕ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದು ಇದೇ ಸಮಯವನ್ನು ಜ್ಞಾನಾರ್ಜನೆಗಾಗಿ ಉಪಯೋಗಿಸಲು ತಿಳಿಸಿದರು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬೇಡಿ, ವಿದ್ಯಾರ್ಥಿ ದೆಸೆಯಲ್ಲಿ ಉತ್ತಮ ಅಂಕಗಳನ್ನು ಪಡೆದರೆ ಮುಂದಿನ ಜೀವನವನ್ನು ಸುಭದ್ರ ಮಾಡಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಮೇಯರ್ ವಿನಾಯಕ ಬಿ.ಎಚ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಕೆ. ನಾಗರಾಜ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗಾಯಿತ್ರಿ ಕೆ.ಹೆಚ್. ಹಾಗೂ ಇನ್ನಿತರರು ಉಪಸ್ಥಿತರಿದ್ದರು.