ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಶಿವಮೊಗ್ಗ :ಆಗಸ್ಟ್ 21, :ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಹೊಂದಿರುವ 6 ರಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.
ಈ ಯೋಜನೆಯು ಅಂಚೆ ಚೀಟಿ ಸಂಗ್ರಹಣೆಯಲ್ಲಿ ಆಸಕ್ತಿ ಮತ್ತು ಅಭಿರುಚಿ ಬೆಳಸಿಕೊಂಡು ತಮ್ಮ ಹವ್ಯಾಸವನ್ನಾಗಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶಹೊಂದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ವರ್ಷಕ್ಕೆ ರೂ.6000/-ಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯ ನೀಡುವ ಅಂಚೆ ಚೀಟಿಗಳ ಸಂಗ್ರಹ ಪ್ರಾಜೆಕ್ಟ್ನಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ.
ಅಂಚೆ ಚೀಟಿ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿಯನ್ನು ಸೆ. 03ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡುವುದು
WhatsApp Group Join Now
Telegram Group Join Now
Share This Article
error: Content is protected !!