ಶಿವಮೊಗ್ಗ, ಜುಲೈ 23 (ಕರ್ನಾಟಕ ವಾರ್ತೆ): ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ 3ಹೆಚ್ಪಿ, 5 ಹೆಚ್ಪಿ ಮತ್ತು ಮೇಲ್ಪಟ್ಟು ಸೋಲಾರ್ ಪಂಪ್ಸೆಟ್ಗಳಿಗೆ ಇಲಾಖೆಯಿಂದ ನಿಗದಿಪಡಿಸಿದ ದರದಂತೆ ಸಹಾಯಧನವನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ಇಲಾಖೆಯಿಂದ ಅನುಮೋದಿತ ಎಂಪ್ಯಾನಲ್ ಸಂಸ್ಥೆಗಳಿಂದ ಸೋಲಾರ್ ಪಂಪ್ಸೆಟ್ಗಳನ್ನು ಅಳವಡಿಸಿಕೊಳ್ಳಬಹುದಾಗಿದ್ದು, ಶಿವಮೊಗ್ಗ ತಾಲೂಕಿನ ಸಾಮಾನ್ಯ ವರ್ಗಕ್ಕೆ -3, ಪ.ಜಾ. ವರ್ಗದವರಿಗೆ 5 ಮತ್ತು ಪ.ಪಂ.ದವರಿಗೆ- 1 ಸೋಲಾರ್ ಪಂಪ್ಸೆಟ್ಗಳಿಗೆ ಅವಕಾಶವಿದ್ದು, ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತಾಲೂಕು ತೋಟಗಾರಿಕೆ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 09ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆ ದೂ.ಸಂ.:08182-279415 ನ್ನು ಸಂಪರ್ಕಿಸುವುದು.
ಶಿವಮೊಗ್ಗ, ಜುಲೈ 23 : ತೋಟಗಾರಿಕೆ ಇಲಾಖೆಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿಮೆ ನೊಂದಣಿಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಲಾಗಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಬೆಳೆ ಸಮೀಕ್ಷೆ ಪ್ರಕಾರ ಹಿಂದಿನ ಎರಡು ವರ್ಷಗಳಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿ, ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.