Ad image

ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

Vijayanagara Vani
ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ಸಿರುಗುಪ್ಪ.ಜೂ.೧9:- ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ತೆಂಗಿನ ಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ, ಬೈಯೋಡೈಜಿಸ್ಟರ್, ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕಿನ ತೋಟಗಾರಿಕೆ ಇಲಾಖೆಯ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಬಾಷ ತಿಳಿಸಿದ್ದಾರೆ.

- Advertisement -
Ad imageAd image

ನಗರದ ತೋಟಗಾರಿಕೆ ಕಚೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತೋಟಗಾರಿಕೆ ಇಲಾಖೆಯ ಮೂಲಕ ಅನುಷ್ಠಾನಗೊಳ್ಳುತ್ತಿರುವ ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ರೈತ ಫಲಾನುಭವಿಗಳಿಗೆ ೨೦೨೪-೨೫ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ರೈತರ ಕಲ್ಯಾಣಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೆಗಾ ಮೈಕ್ರೊ ಆಗ್ರಿ- ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಿಗೆ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿನಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು ನೀಡಲು ಅರ್ಜಿ ಅಹ್ವಾನಿಸಲಾಗಿದ್ದು, ರೈತರು ಈ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಮತ್ತು ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೆAದು ಹೇಳಿದ್ದಾರೆ. ಎಂದು ಮಾಹಿತಿ ನೀಡಿದರು.

Share This Article
error: Content is protected !!
";