ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ”

Vijayanagara Vani
ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕಾಗಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ”
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 05, 2024 2024-25 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಸಚಿವಾಲಯ ಮತ್ತು ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆಯಡಿ ಆನ್ಲೈನ್ ಮೂಲಕ (ವೆಬ್-ಸೈಟ್ http://scholarships.gov.in/) ಅರ್ಜಿ ಆಹ್ವಾನಿಸಲಾಗಿದ್ದು, ಪ್ರಿಮೆಟ್ರಿಕ್ ವ್ಯಾಸಂಗಕ್ಕೆ ಅರ್ಜಿ ಸಲ್ಲಿಸಲು ಕೊನೆಯ 2024ರ ಆಗಸ್ಟ್ 31 ರವೆರೆಗೆ ಹಾಗೂ ಪೋಸ್ಟ್ ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು 2024ರ ಅಕ್ಟೊಬರ್ 31 ರವರೆಗೂ ಕಾಲಾವಕಾಶವಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಈ ಒಂದು ಸೌಲಭ್ಯವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ. ನಂ.3 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ- 080-29787441 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!