Ad image

ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

Vijayanagara Vani
ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ
ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಡಿಗ್ರಿ, ಡಿಪ್ಲೊಮಾ ಜೆ.ಓ.ಸಿ, ವೃತ್ತಿಪರ (ಪ್ರೊಫೆಷನಲ್) ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವರೋ, ಆಯಾ ಜಿಲ್ಲೆಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ್ ತಿಳಿಸಿದ್ದಾರೆ.

Share This Article
error: Content is protected !!
";