Ad image

ಅರಿವು ವಿದೇಶಿ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ : ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Vijayanagara Vani
ಅರಿವು ವಿದೇಶಿ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ : ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಿತ್ರದುರ್ಗ)ಜುಲೈ.30:
ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಅರಿವು ವಿದೇಶಿ ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸಕ್ಕಾಗಿ ನೀಡಲಾಗುವ ಸಾಲ ಸೌಲಭ್ಯಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 24 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶಿ (OVERSEAS EDUCATION) ಸಾಲ ಯೋಜನೆಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು, ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ, ಭಾರತದ ಪ್ರತಿಷ್ಠಿತ ಐಐಟಿಎಸ್, ಐಐಎಂಎಸ್, ಐಎಸ್‌ಸಿ ಸಂಸ್ಥೆಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮಾಡಬಯಸುವವರು, ಈ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ www.kmdconline.karnataka.gov.in ನ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕನಿಷ್ಟ 38 ವರ್ಷಕ್ಕಿಂತ ಕಡಿಮೆ ವಯಸ್ಸು ಹೊಂದಿರಬೇಕು. ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಠ ಶೇ.60 ರಷ್ಟು ಅಂಕ ಪಡೆದಿರಬೇಕು. ವಿದೇಶಿ ವಿಶ್ವವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿಬೇಕು. (Top 200 Universities Listed For Women And Top Universities Lidted For Women And Top 100universities Listed For Men). ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಸಾಲ ಒದಗಿಸಲಾಗುವುದು. ಆಸ್ತಿಯ ಮೌಲ್ಯವು ಸಾಲದ ಮೊತ್ತಕ್ಕಿಂತ ಕಡಿಮೆ ಇರಬಾರದು.
ವಿದ್ಯಾರ್ಥಿಗಳು ಆನ್ಲೆöನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ಪ್ರಿಂಟ್‌ಹೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಸಂಬoಧಿಸಿದ ಎಲ್ಲಾ ದಾಖಲೆಗಳನ್ನು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಚಿತ್ರದುರ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-226412, 8277944213 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
error: Content is protected !!
";