Ad image

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Vijayanagara Vani
ಬೆಂಗಳೂರು, ಆಗಸ್ಟ್ 04  ರಾಜ್ಯ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ 2025-26ರ ಸಾಲಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಅಪ್ರೆಂಟಿಸ್ ಟೆಕ್ನಿಶಿಯನ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪ್ಲೋಮಾ ಪಡೆದಿರಬೇಕು. ನಿಗಧಿತ ವಿದ್ಯಾರ್ಹತೆಯನ್ನು 2023 ಮೇ ತಿಂಗಳ ನಂತರ ಪಡೆದವರು ಮಾತ್ರ ತರಬೇತಿಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಅವರು ಗಳಿಸಿದ ಅಂಕಗಳ ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೇಲೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಈಗಾಗಲೇ ಅಪ್ರೆಂಟಿಸ್ ಪಡೆದವರಾಗಿದ್ದರೆ ಅಂತಹವರು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ತರಬೇತಿಯ ಅವಧಿಯಲ್ಲಿ ಮಾಹೆಯಾನ ರೂ. 8,000/- ಪಾವತಿಸಲಾಗುತ್ತದೆ. (ರೂ. 4000/- ಗಳನ್ನು ರಾಜ್ಯ ಸರ್ಕಾರದಿಂದ ಹಾಗೂ ರೂ. 4000 ಗಳನ್ನು ಅಪ್ರೆಂಟಿಸ್ ಬೋರ್ಡ್ರವರಿಂದ ನೇರವಾಗಿ ಟ್ರೈನಿಗಳ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುತ್ತದೆ).
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂಖ್ಯೆ – 21 ನೆಲಮಹಡಿ, ವಿಧಾನಸೌಧ, ಬೆಂಗಳೂರು- 560 001. ಇವರಿಗೆ ಸೆಪ್ಟೆಂಬರ್ 10 ರ ಒಳಗಾಗಿ ತಲುವುವಂತೆ ಸಲ್ಲಿಸತಕ್ಕದ್ದು. ಅರ್ಜಿಯೊಂದಿಗೆ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ಐ.ಡಿ ಮುಂತಾದ ವಿವರಗಳೊಂದಿಗೆ ಸಲ್ಲಿಸುವುದು. ಅರ್ಜಿಯೊಂದಿಗೆ ದೃಢೀಕರಿಸಲಾಗಿರುವ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು, ಲೈಬ್ರರಿ ಅಂಡ್ ಇನ್ಫರ್ಮೇಷನ್ ಸೈನ್ಸ್ನಲ್ಲಿ ಡಿಪ್ಲೋಮಾ ಹೊಂದಿರುವ ಬಗ್ಗೆ ಪ್ರಮಾಣಪತ್ರ / ತಾತ್ಕಾಲಿಕ ಪ್ರಮಾಣ ಪತ್ರ (Provisional Certificate) ಗಳನ್ನು ಕಡ್ಡಾಯವಾಗಿ ಲಗತ್ತಿಸುವುದು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 080-22033462/4144 ಅಥವಾ ಇ-ಮೇಲ್ ವಿಳಾಸ [email protected] ಕ್ಕೆ ಸಂಪರ್ಕಿಸಬಹುದು ಎಂದು ಸಚಿವಾಲಯ ಗ್ರಂಥಾಲಯದ ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಗಳಾದ ಜ್ಯೋತಿಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";