ಕೊಪ್ಪಳ ಜೂನ್ 19 ಕೊಪ್ಪಳ ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ಮತ್ಸ್ಯಾಶ್ರಯ ಯೋಜನೆಯಡಿ ನಿರ್ವಸತಿ ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವರ್ಗ-19, ಪರಿಶಿಷ್ಟ ಜಾತಿ-4, ಪರಿಶಿಷ್ಟ ಪಂಗಡ-2 ಸೇರಿದಂತೆ ಒಟ್ಟು 25 ಮನೆಗಳು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಸಾಮಾನ್ಯ ವರ್ಗ-19, ಪರಿಶಿಷ್ಟ ಜಾತಿ-4, ಪರಿಶಿಷ್ಟ ಪಂಗಡ-2 ಸೇರಿದಂತೆ ಒಟ್ಟು 25 ಮನೆಗಳು ಹಂಚಿಕೆಯಾಗಿದ್ದು, ಕೊಪ್ಪಳ ಮತ್ತು ಯಲಬುರ್ಗಾ ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ನಿರ್ವಸತಿ ಮೀನುಗಾರರು ಜೂನ್ 30 ರೊಳಗಾಗಿ ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು: 9148289737 ಗೆ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆಯ ತಿಳಿಸಿದೆ.