ಧಾರವಾಡ ಏ.03: ಸರ್ಕಾರಿ ಸೇವೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರವು ನೀಡುವ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ 2024 ಮತ್ತು 2025 ನೇ ಸಾಲಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ಅಧಿಕಾರಿ, ನೌಕರರು ಆನ್ಲೈನ್ ಮೂಲಕ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಹಾಗೂ ಜಿಲ್ಲಾಮಟ್ಟದ ಸರ್ವೊತ್ತಮ ಸೇವಾ ಪ್ರಶಸ್ತಿಗಾಗಿ ಪ್ರತ್ಯೇಕವಾಗಿ ಅರ್ಜಿಗಳನ್ನು https://sarvothamaawards.karnataka.gov.in ಮತ್ತು https://dparar.karnataka.gov.in ವೆಬ್ಸೈಟ್ಗಳ ಮೂಲಕ ಏಪ್ರಿಲ್ 09, 2025 ರೊಳಗಾಗಿ ಸಲ್ಲಿಸಬಹುದಾಗಿದೆ. ಆನಲೈನ್ ಮೂಲಕ ಕನ್ನಡ ಅಥವಾ ಇಂಗ್ಲೀμïದಲ್ಲಿ ಮಾಹಿತಿಯನ್ನು ತುಂಬಿ ಅರ್ಜಿ ಸಲ್ಲಿಸಬೇಕು. ಕನ್ನಡದಲ್ಲಿ ಅರ್ಜಿ ಸಲ್ಲಿಸುವಾಗ ಮಾಹಿತಿಯನ್ನು ನುಡಿ 6.0 ತಂತ್ರಾಂಶ ಬಳಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 09, 2025 ರಂದು ಸಂಜೆ 5 ಗಂಟೆಯೊಳಗಾಗಿ ಆನ್ಲೈನ್ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಮ್ಮ ಇಲಾಖೆಯ ಮುಖ್ಯಸ್ಥರ (ಡಿಡಿಓ) ಶಿಫಾರಸ್ಸಿನೊಂದಿಗೆ ಒಂದು ಮುದ್ರಿತ (ಹಾರ್ಡ್) ಪ್ರತಿಯನ್ನು ನೊಡಲ್ ಅಧಿಕಾರಿಯಾಗಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಕೆ.ಪಿ. ಅವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.