ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಸಹಾಯಕ ಆಯುಕ್ತ ಪ್ರಮೋದ್

Vijayanagara Vani
ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಿ: ಸಹಾಯಕ ಆಯುಕ್ತ ಪ್ರಮೋದ್

 

- Advertisement -
Ad imageAd image

ಬಳ್ಳಾರಿ,ಜ.03
ಜಿಲ್ಲಾಡಳಿತದಿಂದ ಜ.15 ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಜ.19 ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜ.21 ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಪ್ರಮೋದ್ ಅವರು ಹೇಳಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿ ವಿವಿಧ ಮಹನೀಯರ ಜಯಂತಿಯನ್ನು ವಿಜೃಂಭಣೆಯಿಂದ ನಡೆಸಲಾಗುತ್ತದೆ. ಜಯಂತಿಯಂದು ಅದ್ದೂರಿ ಮೆರವಣಿಗೆ ನಡೆಯಲಿದೆ. ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಮೆರವಣಿಗೆ ನಂತರ ವೇದಿಕೆ ಕಾರ್ಯಕ್ರಮ ಇರಲಿದ್ದು, ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿ ಕಾರ್ಯಕ್ರಮದಂದು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಲಘು ಉಪಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹೇಳಿದರು.
ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಹನೀಯರ ಕುರಿತು ವಿಶೇಷ ಉಪನ್ಯಾಸ, ಆಯಾ ಸಮುದಾಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದರು.
ಸಭೆಯಲ್ಲಿ ಸಮಾಜದ ಮುಖಂಡರುಗಳು ತಮ್ಮ ಸಲಹೆಗಳನ್ನು ನೀಡಿದರು.
ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
———–

Share This Article
error: Content is protected !!
";