ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಪೂರ್ವಭಾವಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ

Vijayanagara Vani
ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಪೂರ್ವಭಾವಿ ಪರೀಕ್ಷೆ : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ, ಆ.07, 
ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳ ಪರೀಕ್ಷೆ ನಡೆಯಲಿದ್ದು, ಪಾರದರ್ಶಕವಾಗಿ ಮತ್ತು ಸುಗಮವಾಗಿ ಪರೀಕ್ಷೆಗಳು ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಸಂಬoಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕ ಪ್ರದೀಪ್ ನಿಕ್ಕಂ ತಿಳಿಸಿದರು.
ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ ನಂತರ ತಾಲ್ಲೂಕು ಕಚೇರಿಯ ಕೆಸ್ವಾನ್ ಕಚೇರಿಯಲ್ಲಿ ಪರೀಕ್ಷೆಗೆ ನಿಯೋಜಿತರಾಧ ಅಧಿಕಾರಿಗಳಿಗೆ ಅವರು ಸೂಚನೆಗಳನ್ನು ನೀಡಿದರು.
ದಿನಾಂಕ: 11-08-2024 ರ ಭಾನುವಾರದಂದು ಶಿವಮೊಗ್ಗದ ಸಹ್ಯಾದ್ರಿ ಕಲಾ ಹಾಗೂ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣೆ ಕಾಲೇಜು ಈ 02 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಸಾಮಾನ್ಯ ಅಧ್ಯಯನ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ವಾಣಿಜ್ಯಶಾಸ್ತç ಮತ್ತು ನಿರ್ವಹಣೆ ವಿಷಯ ಕುರಿತು ಒಟ್ಟು 900 ಅಭ್ಯರ್ಥಿಗಳು ಉಳಿಕೆ ಮೂಲ ವೃಂದದ ಸಹಾಯಕ ನಿಯಂತ್ರಕರ 43 ಹುದ್ದೆ ಮತ್ತು ಲೆಕ್ಕ ಪರಿಶೋಧನಾಧಿಕಾರಿ 54 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಬರೆಯಲಿದ್ದಾರೆ. ಇಬ್ಬರು ವಿಶೇಷಚೇತನರು ಪರೀಕ್ಷೆ ಬರೆಯುತ್ತಿದ್ದು ಅವರಿಗೆ ನಿಯಮಾನುಸಾರ ಸ್ಕೆçöÊಬ್‌ಗೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷೆಗಳು ಪಾರದರ್ಶಕವಾಗಿ ಮತ್ತು ಸುಲಲಿತವಾಗಿ ನಡೆಯಲು ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿ ಮತ್ತು ವೀಕ್ಷಕರನ್ನು ನೇಮಿಸಲಾಗಿದೆ. ಯಾವುದೇ ಅವ್ಯವಹಾರಕ್ಕೆ ಆಸ್ಪದ ನೀಡದಂತೆ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ – 2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್, ಬ್ಲೂಟೂಥ್ ಡಿವೈಸ್, ಸ್ಮಾರ್ಟ್ವಾಚ್ ಸೇರಿದಂತೆ ಯಾವುದೇ ಎಲೆಕ್ಟಾçನಿಕ್ ವಸ್ತುಗಳಿಗೆ ಅವಕಾಶವಿಲ್ಲ. ನಿಯೋಜಿತ ಸಿಬ್ಬಂದಿಗಳು ಎಚ್ಚರಿಕೆಯಿಂದ ಅಭ್ಯರ್ಥಿಗಳನ್ನು ತಪಾಸಣೆಗೊಳಪಡಿಸಿ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ನೀಡಬೇಕು. ಅಭ್ಯರ್ಥಿಗಳು ನಿಗದಿತ ವೇಳೆಯೊಳಗೆ ಪರೀಕ್ಷಾ ಕೇಂದ್ರಗಳ ಒಳಗೆ ಹಾಜರಿರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸಲಾಗುವುದು. ಹಾಗೂ ಆಯೋಗ ಈ ಬಾರಿ ಜ್ಯಾಮರ್ ಮತ್ತು ಕೊಠಡಿ ಪರಿವೀಕ್ಷಕರಿಗೆ ಬಾಡಿ ಕ್ಯಾಮರಾ ನೀಡಲಾಗುತ್ತಿದ್ದು ಅಳವಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನಗಳ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಪರೀಕ್ಷೆಯ ಎಲ್ಲ ಸಿದ್ದತೆಗಳನ್ನು ಹಿಂದಿನ ದಿನವೇ ಖಾತ್ರಿಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಪರೀಕ್ಷೆಯಲ್ಲಿ ಪರಿವೀಕ್ಷಕರು ಅಭ್ಯರ್ಥಿಗಳಿಗೆ ನೀಡುವ ಸೂಚನೆ, ವೀಕ್ಷಕರು, ಮಾರ್ಗಾಧಿಕಾರಿಗಳು ಇತರೆ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳು ಮತ್ತು ಪರೀಕ್ಷಾ ನಂತರ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ವೀಕ್ಷಕರಾದ ಡಾ.ಸಿ.ಎ.ಹಿರೇಮಠ್, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು
WhatsApp Group Join Now
Telegram Group Join Now
Share This Article
error: Content is protected !!