ಕೋವಿಶೀಲ್ಡ್ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮವಿದೆ ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ, ಟಿಟಿಎಸ್ಗೂ ಕಾರಣವಾಗಬಹುದು

Vijayanagara Vani
ಕೋವಿಶೀಲ್ಡ್ ಕೊರೊನಾ ಲಸಿಕೆಯಿಂದ ಅಡ್ಡಪರಿಣಾಮವಿದೆ ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ, ಟಿಟಿಎಸ್ಗೂ ಕಾರಣವಾಗಬಹುದು

ಬ್ರಿಟಿಷ್ ಫಾರ್ಮಾ ಅಸ್ಟ್ರಾಜೆನೆಕಾ ತನ್ನ ಕೋವಿಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್​ಗೆ ಕಾರಣವಾಗಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಕೋವಿಶೀಲ್ಡ್(Covishield) ಔಷಧಿಯಿಂದಾಗುವ ಅಡ್ಡಪರಿಣಾಮಗಳ ಬಗ್ಗೆ ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ(AstraZeneca) ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತನ್ನ ಲಸಿಕೆಯಿಂದ ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮ ಉಂಟಾಗಬಹುದು, ಆದರೆ ಲಸಿಕೆ ಪಡೆಯದವರಲ್ಲೂ ಟಿಟಿಎಸ್ ಕಾಣಿಸಿಕೊಳ್ಳಬಹುದು. ಆದ್ದರಿಂದ ಈ ಕುರಿತು ವಿಸ್ತೃತ ಅಧ್ಯಯನದ ಅಗತ್ಯವಿದೆ ಎಂದು ಅಸ್ಟ್ರಾಜೆನೆಕಾ ಪ್ರತಿಪಾದಿಸಿದೆ.

ಇದೇ ಆಸ್ಟ್ರಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್‌ ಕೋವಿಶೀಲ್ಡ್‌ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಮತ್ತು ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ ಆಗಿದ್ದ ಕಾರಣ, ಲಂಡನ್‌ ನ್ಯಾಯಾಲಯದಲ್ಲಿ ಆಸ್ಟ್ರಾಜೆನಿಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಟಿಟಿಎಸ್ ಸಿಂಡ್ರೋಮ್ ಎಂದರೇನು? ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದಾಗಿ ಪಾರ್ಶ್ವವಾಯು, ಹೃದಯಸ್ತಂಭನ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಇದು ಪ್ಲೇಟ್​ಲೆಟ್​ಗಳಸ ಸಂಖ್ಯೆಯನ್ನೂ ಕೂಡ ಕಡಿಮೆ ಮಾಡುತ್ತದೆ.

ಕಂಪನಿ ಹೇಳಿದ್ದೇನು?: ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ.

ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ. ವಿಶ್ವದಾದ್ಯಂತ 78 ಕೋಟಿ ಜನರಿಗೆ ಕೊರೊನಾ ಸೋಂಕು ತಗುಲಿತ್ತು, 70 ಲಕ್ಷಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಭಾರತದಲ್ಲಿ 45 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ವ್ಯಾಪಿಸಿ 5 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

WhatsApp Group Join Now
Telegram Group Join Now
Share This Article
error: Content is protected !!