Ad image

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ

Vijayanagara Vani
ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ
ಚಿತ್ರದುರ್ಗಆಗಸ್ಟ್ 01:
ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಬುಧವಾರ ಜಿಲ್ಲಾ, ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿ, ದಂಡ ವಿಧಿಸಿದೆ.
ಸಾರ್ವಜನಿಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು.
ಸಂಬ0ಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 22 ಕೇಸುಗಳನ್ನು ದಾಖಲಿಸಿ ರೂ. 2200 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 05 ಕೇಸುಗಳನ್ನು ದಾಖಲಿಸಿ ರೂ. 500 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 05 ಕೇಸುಗಳನ್ನು ದಾಖಲಿಸಿ ರೂ. 500 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಹೊಸದುರ್ಗ ಪೊಲೀಸ್ ಇಲಾಖೆ ಎಎಸ್‌ಐ ಮಹೇಶ್ವರಪ್ಪ, ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದರಾಮಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪರಮೇಶ್ವರಪ್ಪ, ಜಗದೀಶ, ಮಲ್ಲಿಕಾರ್ಜುನ ಇದ್ದರು.

Share This Article
error: Content is protected !!
";