ಬಳ್ಳಾರಿ,ಜು.03
ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಜು.05 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸ್ಟೇಡಿಯಂ ರಸ್ತೆಯ ವಾಲ್ಮೀಕಿ ಭವನದಲ್ಲಿ ಬಳ್ಳಾರಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕಾರ್ಮಿಕ ಸಚಿವರು, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರು ಉದ್ಘಾಟಿಸುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು.
ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಭಾರತಿ.ಡಿ., ಸಾರಿಗೆ ಇಲಾಖೆಯ ಸಾರಿಗೆ ಮತ್ತು ಸುರಕ್ಷತೆಯ ಆಯುಕ್ತ ಯೋಗೀಶ್ ಎ.ಎಂ., ಕಾರ್ಮಿಕ ಆಯುಕ್ತರು ಹಾಗೂ ರಾಜ್ಯ ವಿಮಾ ಯೋಜನಾ ವೈದ್ಯಕೀಯ ಸೇವೆಗಳ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಂಟಿ ಕಾರ್ಮಿಕ ಆಯುಕ್ತರು ಹಾಗೂವ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಡಾ.ಎಸ್.ಬಿ ರವಿಕುಮಾರ್ ಸೇರಿದಂತೆ ಇತರರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಕಲಬುರ್ಗಿಯ ಕಲಬುರ್ಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ್ ಶಿಂದಿಹಟ್ಟಿ, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ್ ನಾಯಕ್, ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರು, ಬಳ್ಳಾರಿ 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಪರಶುರಾಮ್ ಎನ್.ಎಸ್., ಬಳ್ಳಾರಿ 1ನೇ ವೃತ್ತದ ಕಾರ್ಮಿಕ ನಿರೀಕ್ಷಕ ರಮೇಶ್ ಗಡ್ಡದ್, ಸಂಡೂರು ವೃತ್ತದ ಕಾರ್ಮಿಕ ನಿರೀಕ್ಷಕ ಮಂಜುನಾಥ್ ತೊಂಡಿಹಾಳ, ಸಿರುಗುಪ್ಪ ವೃತ್ತದ ಕಾರ್ಮಿಕ ನಿರೀಕ್ಷಕ ತಿರುಮಲೇಶ್, ಹೋಸಪೇಟೆ (ಕಂಪ್ಲಿ) 2ನೇ ವೃತ್ತದ ಕಾರ್ಮಿಕ ನಿರೀಕ್ಷಕ ಶಿವಶಂಕರ್ ತಳವಾರ ಸೇರಿದಂತೆ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು, ಕಾರ್ಮಿಕ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.