ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥ

Vijayanagara Vani
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥ

ತಂಬಾಕು ಮುಕ್ತ ರಾಷ್ಟç ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು: ನ್ಯಾಯಾಧೀಶ ಸಿದ್ದರಾಮಪ್ಪ ಕಲ್ಯಾಣರಾವ್
 ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ೭1987 ರಿಂದ 37 ವರ್ಷಗಳಿಂದ ಆಚರಿಸಲಾಗುತ್ತಿದೆ. ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತವೆ ಆದ್ದರಿಂದ ಪ್ರತಿಯೊಬ್ಬರು ತಂಬಾಕು ಮುಕ್ತ ರಾಷ್ಟç ನಿರ್ಮಾಣಕ್ಕೆ ಶ್ರಮಿಸಬೇಕು ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ಹೇಳಿದರು.
ಅವರು ಮೇ.31ರ(ಶುಕ್ರವಾರ) ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ತರಬೇತಿ ಕೇಂದ್ರ, ನವೋದಯ ಡೆಂಟಲ್ ಕಾಲೇಜು, ಎ.ಎಂ.ಇ ಡೆಂಟಲ್ ಕಾಲೇಜು ಮತ್ತು ಎಸ್.ಕೆ.ಇ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.


ತಂಬಾಕು ಸೇವನೆಯಿಂದ ಬಾದಿತರಾದವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದ್ದು, ಪ್ರಸ್ತುತ ದಿನಮಾನಗಳಲ್ಲಿ 13ರಿಂದ 15ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚಾಗಿ ತಂಬಾಕು ಸೇವನೆ ಕಂಡುಬರುತ್ತಿದೆ. ಈ ಮಕ್ಕಳಲ್ಲಿ ತಂಬಾಕಿನಿoದಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದರು.
ಜಾಗೃತಿ ಕಾರ್ಯಕ್ರಮಗಳಿಂದ ಸಮಾಜದಲ್ಲಿ ತಂಬಾಕು ಸೇವನೆ ಕಡಿಮೆಯಾಗುತ್ತಾ ಹೋಗುತ್ತದೆ. ಆದ್ದರಿಂದ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಪ್ರತಿಯೊಬ್ಬರು ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ತಂಬಾಕು ಸೇವನೆಯಿಂದ20 ರೀತಿಯ ಕ್ಯಾನ್ಸರ್ ರೋಗಗಳು ಹರಡುತ್ತವೆ ಎಂದು ವೈಜ್ಞಾನಿಕವಾಗಿ ಸಾಭೀತಾಗಿದ್ದು, ಇದನ್ನು ಬೇರು ಸಮೇತ ತೆಗೆದು ಹಾಕಲು, ಈ ವರ್ಷದ ಘೋಷವಾಕ್ಯದಂತೆ ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸಲು ಪ್ರತಿಯೊಬ್ಬರು ಪಣ ತೊಡಬೇಕಾಗಿದೆ ಎಂದರು.
ಇದೇ ವೇಳೆ ರಿಮ್ಸ್ ಮೆಡಿಕಲ್, ಎಎಂಇ ಡೆಂಟಲ್ ಕಾಲೇಜು ವಿದ್ಯಾರ್ಥಿಗಳಿಂದ ತಂಬಾಕು ನಿಯಂತ್ರಣದ ಕುರಿತು ಕಿರು ನಾಟಕ ಪ್ರದರ್ಶನ ಮಾಡಲಾಯಿತು.
ಇ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ರಿಮ್ಸ್ ನಿರ್ದೇಶಕ ಡಾ.ರಮೇಶ.ಬಿ.ಬಿ.ಎಚ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಮನೋರೋಗ ತಜ್ಞ ಡಾ.ಮನೋಹರ.ವೈ ಪತ್ತಾರ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಕುಷ್ಠರೋಗ ನಿವಾರಣಾಧಿಕಾರಿ ಡಾ.ಯಶೋಧಾ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ವೈ ವೆಂಕಟೇಶ, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ವಿಜಯಶಂಕರ, ನವೋದಯ ಡೆಂಟಲ್ ಕಾಲೇಜಿನ ಪ್ರಾಚಾರ್ಯ ಡಾ.ಗಿರೀಶ ಕಟ್ಟಿ, ಎ.ಎಂ ಇ ಡೆಂಟಲ್ ಕಾಲೇಜಿನ ಪ್ರಾಚಾರ್ಯ ಡಾ.ಶಿವಾನಂದ ಅಸ್ಪಲಿ, ರಿಮ್ಸ್ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಶ್ರೀಶೈಲ, ಎಸ್.ಕೆ.ಇ.ಎಸ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಬಾಬುರಾವ್, ಜಿಲ್ಲಾ ತಂಬಾಕು ನಿಯಂತ್ರಣಾ ಕೋಶದ ಯಂಕೋಬ ಸರ್ಜಾಪೂರ, ಅನ್ನಪೂರ್ಣಬಾಯಿ, ಸಂದ್ಯಾ, ಸರೋಜಾ, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article
error: Content is protected !!