Ad image

ಬಳ್ಳಾರಿ: ಎಲ್ಲಾ ಮೋಟಾರ್ ಬೈಕ್ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ

Vijayanagara Vani
ಬಳ್ಳಾರಿ: ಎಲ್ಲಾ ಮೋಟಾರ್ ಬೈಕ್ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ
ಬಳ್ಳಾರಿ,ಮೇ 29
ಜಿಲ್ಲೆಯಲ್ಲಿ ಎಲ್ಲಾ ಮೋಟಾರ್ ಬೈಕ್ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಭಾರತೀಯ ಮೋಟಾರು ವಾಹನ ಕಾಯ್ದೆ 1989 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ ಪ್ರಕಾರ ಪ್ರತಿಯೊಬ್ಬ ಮೋಟಾರ್ ಸೈಕಲ್ ವಾಹನ ಸವಾರ (Rider) ಹಾಗೂ ಹಿಂಬದಿ ಸವಾರನು (Pillion Rider) ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ.
ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳಲ್ಲಿ ತಲೆಗೆ ತೀವ್ರಗಾಯಗಳಾಗಿ ಸಾವಿಗೀಡಾಗಿರುತ್ತಿರುವುದು ಕಂಡುಬರುತ್ತಿದ್ದು, ಹಾಗಾಗಿ ಪ್ರತಿಯೊಬ್ಬ ಸಾರ್ವಜನಿಕರು ವಾಹನ ಚಲಾಯಿಸುವಾಗ ಸವಾರ ಮತ್ತು ಹಿಂಬದಿ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
ವಾಹನ ಚಲಾಯಿಸುವ ತಮ್ಮ ಕುಟುಂಬದ ಎಲ್ಲಾ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಡ್ಡಾಯವಾಗಿ ಐ.ಎಸ್.ಐ ಮಾರ್ಕ್ ಹೊಂದಿದ ಹೆಲ್ಮೆಟ್ ‌ನ್ನು ಧರಿಸಬೇಕು. ಮುಖ್ಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕು.
ಪ್ರಸ್ತುತ ಜಿಲ್ಲೆಯ ಎಲ್ಲಾ ಸಾರ್ವಜನಿಕ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ಈ ಬಗ್ಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಒಂದು ವೇಳೆ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Share This Article
error: Content is protected !!
";