Ad image

ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲೆ ಮಟ್ಟದ ಸ್ಪರ್ಧ ಚಟುವಟಿಕೆಗಳು

Vijayanagara Vani
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲೆ ಮಟ್ಟದ ಸ್ಪರ್ಧ ಚಟುವಟಿಕೆಗಳು

ಬಳ್ಳಾರಿ ನಗರದ ಸರ್ಕಾರಿ ಮಾಜಿ ಪುರಸಭೆ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಬಳ್ಳಾರಿ, ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ ) ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 3.12.2024ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಬಳ್ಳಾರಿ ಜಿಲ್ಲಾ ಮಟ್ಟದ ಸ್ಪರ್ಧಾ ಚಟುವಟಿಕೆಗಳನ್ನು ನಡಸಿಕೋಡಲಾಯಿತು
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ಶ್ರೀಯುತ ವಿನೋದ್ ಕುಮಾರ್ ಸಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ತಮ್ಮ ಉದ್ಘಾಟನಾ ನುಡಿಯಲ್ಲಿ ಯುವ ಮತದಾರರು ಜಾಗೃತರಾದಾಗ ಮಾತ್ರ ದೇಶದ ಭವಿಷ್ಯ ಬದಲಾಗಲು ಸಾಧ್ಯ, 18 ವರ್ಷ ತುಂಬಿದ ಎಲ್ಲಾ ಯುವಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕಡ್ಡಾಯವಾಗಿ ಮತದಾನ ಮಾಡುವ ನಿರ್ಧಾರವನ್ನು ಕೈಗೊಳ್ಳಿ ಮತದಾನಕ್ಕಿಂತ ಪವಿತ್ರ ಕಾರ್ಯ ಬೇರೊಂದಿಲ್ಲ ಎಂದು ಹೇಳಿದರು
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಳ್ಳಾರಿ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಎಂ ಶ್ರೀಶೈಲ್ ರವರು ಮತ್ತು., ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಜಿಲ್ಲಾ ಪಂಚಾಯಿತಿಯ ಸಹಾಯಕ ನಿರ್ದೇಶಕರಾದ ಎಂ ಬಸವರಾಜ್ ಹಿರೇಮಠ್ ರವರು ಉಪಸ್ಥಿತರಿದ್ದರು..
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪಿ ನಾಗೇಶ್ವರ ರಾವ್ ರವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಮತದಾನಕ್ಕಿಂತ ಪವಿತ್ರವಾದ ಕಾರ್ಯ ಮತ್ತೊಂದಿಲ್ಲ ನಾವು ನೀವೆಲ್ಲರೂ ಉತ್ತಮ ವ್ಯಕ್ತಿಗೆ ಮತವನ್ನು ನೀಡಿ ದೇಶವನ್ನು ಸದೃಢಗೊಳಿಸೋಣ.” ದೇಶ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನೇನು ಕೊಟ್ಟಿದ್ದೇನೆ ಎನ್ನುವುದು ಬಹಳ ಮುಖ್ಯವಾಗುತ್ತದೆ “. ಮತದಾನದ ನೋಂದಣಿಯನ್ನು ಮತದಾನದ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ಶಾಲಾ ಕಾಲೇಜುಗಳಲ್ಲಿ ನಡೆದಾಗ ಮಕ್ಕಳಿಗೆ ಮತದಾನ ಜಾಗೃತಿಯ ಅರಿವು ಮೂಡುತ್ತದೆ ಎಂದು ಹೇಳಿದರು
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರದ ಈರೇಶಪ್ಪ ರವರು ಅತಿಥಿಗಳನ್ನು ಸ್ವಾಗತಿಸಿದರು ಬಳ್ಳಾರಿ ಜಿಲ್ಲೆಯ ಯುವ ಮತದಾರರ ನೋಂದಣಿ ಮತ್ತು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳಾದ ನಾಗರೆಡ್ಡಿ ಕೆ ವಿ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.. ಕೊನೆಗೆ ವಿದ್ಯಾರ್ಥಿ ಮಲ್ಲಿಕಾರ್ಜುನ್ ವಂದಿಸಿದರು.
ಬಳ್ಳಾರಿ ಜಿಲ್ಲಾ ಸ್ಪರ್ಧಾ ಚಟುವಟಿಕೆಗಳಲ್ಲಿ ಬಳ್ಳಾರಿ ತಾಲೂಕಿನ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಸಪ್ರಶ್ನೆ ಸ್ಪರ್ಧೆ, ಬಿತ್ತಿ ಪತ್ರ ಸ್ಪರ್ಧೆ, ಪ್ರಬಂಧ (ಕನ್ನಡ ಮಾಧ್ಯಮದಲ್ಲಿ) ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುರುಗೋಡು ತಾಲೂಕಿನ ಬೃಂದಾ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ ನಂದಿನಿ ರವರು ಪ್ರಬಂಧ ಸ್ಪರ್ಧೆ (ಆಂಗ್ಲ ಮಾಧ್ಯಮ ) ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಮಾನ್ಯ ಉಪನಿರ್ದೇಶಕರಾದ ಶ್ರೀಯುತ ಟಿ.ಪಾಲಾಕ್ಷ ರವರು ಮತ್ತು ಬಳ್ಳಾರಿ ಜಿಲ್ಲೆಯ ಎಲ್ಲಾ ಪ್ರಾಚಾರ್ಯರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ

- Advertisement -
Ad imageAd image
Share This Article
error: Content is protected !!
";