ಹರಪನಹಳ್ಳಿ ತಾಲೂಕಿನ ಅರಸೀಕೆರೆ ಹೋಬಳಿಯ ಅರಸೀಕೆರೆ ಮತ್ತು ಉಚ್ಚಂಗಿದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

Vijayanagara Vani
ಹರಪನಹಳ್ಳಿ ತಾಲೂಕಿನ ಅರಸೀಕೆರೆ ಹೋಬಳಿಯ ಅರಸೀಕೆರೆ ಮತ್ತು ಉಚ್ಚಂಗಿದುರ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಹರಪನಹಳ್ಳಿ ;- ನರೇಂದ್ರ ಮೋದಿ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಅರಸೀಕೆರೆ ಹೋಬಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ತಾಲೂಕಿನ ಅರಸೀಕೆರೆ ಹೋಬಳಿಯ ಉಚ್ಚಂಗಿದುರ್ಗ ಗ್ರಾಮದ ಪಾದಗಟ್ಟಿ ಹತ್ತಿರ ಹಾಗೂ ಅರಸೀಕೆರೆ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತರಿಂದ ನರೇಂದ್ರ ಮೋದಿಯವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚಾರಣೆ ಮಾಡಿದರು.
ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ನರೇಂದ್ರ ಮೋದಿಜಿಯವರಿಗೆ ಅಭಿನಂದನೆ ಸಲ್ಲಿಸಿದರು. ಮೋದಿಜಿಯವರ ಪ್ರಮಾಣ ವಚನ ಸ್ವೀಕಾರದ ದಿನದಂದು ಯುವಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವೈ.ಡಿ.ಅಣ್ಣಪ್ಪ, ಪ್ರಶಾಂತ್ ಪಾಟೇಲ್, ಬೇವಿನಹಳ್ಳಿ ಕೆಂಚನಗೌಡ, ಎಸ್.ಹನುಮಂತಪ್ಪ, ಈರಣ್ಣ ಮಾಸ್ತರ್, ಉಚ್ಚೆಂಗೆಮ್ಮ ದೇವಸ್ಥಾನ ಕಮಿಟಿ ಅಧ್ಯಕ್ಷ ಕಟಿಗಿ ಪರುಸಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಕೆಂಚಪ್ಪ, ಹಾಲೇಶ್, ಯುವ ಮುಖಂಡರಾದ ಮಹಾಭಲೇಶ್ವರ ಗೌಡ, ಫಣಿಯಾಪುರದ ಲಿಂಗರಾಜ್, ಹಡಪದ ಸಿದ್ದೇಶ್, ಯುವರಾಜ್, ವೀರೇಶ್, ಕೆಂಚಹನುಮಪ್ಪ, ಚಂದ್ರಪ್ಪ, ಕೆಂಚಜ್ಜ, ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

- Advertisement -
Ad imageAd image
Share This Article
error: Content is protected !!
";