Ad image

ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

Vijayanagara Vani
ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ
ಬಳ್ಳಾರಿ,ಮೇ 22
ಬೆಂಬಲ ಯೋಜನೆಯಡಿ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.7,280 ರಂತೆ ರೈತರಿಂದ ಖರೀದಿಸಲಾಗುವುದು. ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ವತಿಯಿಂದ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
*ಖರೀದಿ ಕೇಂದ್ರಗಳ ವಿವರ:*
ಬಳ್ಳಾರಿ ಎಪಿಎಂಸಿ ಯ ಆಡಳಿತ ಕಚೇರಿ(ಮೊ.8722047273, 6366975388). ಬಳ್ಳಾರಿ ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ(ಮೊ.7353155205). ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತವು ಖರೀದಿ ಏಜೆನ್ಸಿಯಾಗಿರುತ್ತದೆ.
*ಬೇಕಾದ ದಾಖಲೆ:*
ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾ0ಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ.
ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.
ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು. ನೋಂದಾಯಿಸಿಕೊಳ್ಳಲು ಇಂದಿನಿ0ದ 80 ದಿನಗಳವರೆಗೆ ಕಾಲಾವಕಾಶ ನೀಡಲಾಗಿದೆ.
ನಿಗಧಿತ ಅವಧಿಯೊಳಗೆ ನೋಂದಾಯಿಸಿಕೊoಡ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್‌ನಿoದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಸೂರ್ಯಕಾಂತಿ ಉತ್ಪನ್ನವನ್ನು ಇಂದಿನಿ0ದ 90 ದಿನಗಳವರೆಗೆ ಬೆಳಿಗ್ಗೆ 09 ಗಂಟೆಯಿoದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುತ್ತದೆ.
ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";