Ad image

ಡಿ.27 ರಂದು ಸುವರ್ಣ ವಿಧಾನ ಸೌಧದಲ್ಲಿ ಬೃಹತ ಗಾಂಧೀ‌ ಪ್ರತಿಮೆ ಅನಾವರಣ ….. ಶತಮಾನೋತ್ಸವ- ವರ್ಷವಿಡೀ ಕಾರ್ಯಕ್ರಮ : ಸಚಿವ ಎಚ್.ಕೆ.ಪಾಟೀಲ

Vijayanagara Vani
ಡಿ.27 ರಂದು ಸುವರ್ಣ ವಿಧಾನ ಸೌಧದಲ್ಲಿ ಬೃಹತ ಗಾಂಧೀ‌ ಪ್ರತಿಮೆ ಅನಾವರಣ ….. ಶತಮಾನೋತ್ಸವ- ವರ್ಷವಿಡೀ ಕಾರ್ಯಕ್ರಮ : ಸಚಿವ ಎಚ್.ಕೆ.ಪಾಟೀಲ
ಬೆಳಗಾವಿ ಡಿ.25: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶತಮಾನೊತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪ್ರವಾಸೊದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು.
ಬೆಳಗಾವಿ ಸುವರ್ಣ ಸೌಧ ಆವರಣದಲ್ಲಿ ಬುಧವಾರ (ಡಿ.25) ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು‌ ಮಾತನಾಡಿದರು.
ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ‌ ಸುಧಾರಣೆಯ ಅಸ್ತ್ರವಾಗಿತ್ತು ಎಂದರು.
ಸಮಾಜದಲ್ಲಿನ‌ ಅಸ್ಪ್ರಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆಯನ್ನು ಬೆಸೆಯುವುದರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಲಾಯಿತು.
1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೇಸ್ ಅಧಿವೇಶನ ಶತಮಾನೋತ್ಸವನ್ನು ಆಚರಿಸುವ ಮೂಲಕ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಪಾಟೀಲ ವಿವರಿಸಿದರು.
ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರಕಾರ 41 ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಸುವರ್ಣ ಸೌಧದಲ್ಲಿನ ಮಹಾತ್ಮಾ ಗಾಂಧೀಜಿ ಅವರ ಬೃಹತ ಪ್ರತಿಮೆಯನ್ನು ಡಿ.27 ರಂದು ಮುಂಜಾನೆ 10 ಗಂಟೆಗೆ ಅನಾವರಣಗೊಳಿಸಲಾಗುವದು. ಈ ಬೃಹತ ಕಾರ್ಯಕ್ರಮಕ್ಕೆ ಸರ್ವ ಪಕ್ಷದ ನಾಯಕರು, ಸ್ವಾತಂತ್ರ್ಯ ಹೊರಾಟಗಾರರನ್ನು, ಆಹ್ವನಿಸಲಾಗಿದೆ.
ಡಿ.26 ರಂದು ನಗರದ‌ ವೀರಸೌಧದಲ್ಲಿನ ಗಾಂಧೀಜಿಯವರ ಪ್ರತಿಮೆ ಹಾಗೂ ರಾಮತೀರ್ಥ ನಗರದಲ್ಲಿನ ಗಂಗಾಧರ್ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಉದ್ಘಾಟಿಸಲಾಗುವುದು ಎಂದು ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ‌ ಮುಖ್ಯ ಮುಖ್ಯಮಂತ್ರಿಗಳಾದ ವೀರಪ್ಪ‌ ಮೊಯಿಲಿ, ಮಾಜಿ ಸಭಾಪತಿಗಳಾದ ಬಿ.ಎಲ್.ಶಂಕರ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ‌ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರು ಹಾಜರಿದ್ದರು.
Share This Article
error: Content is protected !!
";