ಜಿಲ್ಲಾ ಆಸ್ಪತ್ರೆಗೆ ಮಹಿಳಾ‌ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ‌ಚೌಧರಿ ಭೇಟಿ ಶುದ್ಧ ಕುಡಿಯುವ ನೀರು, ಮೂಲಸೌಕರ್ಯ ಒದಗಿಸಲು‌ ಸೂಚನೆ

Vijayanagara Vani
ಜಿಲ್ಲಾ ಆಸ್ಪತ್ರೆಗೆ ಮಹಿಳಾ‌ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ‌ಚೌಧರಿ ಭೇಟಿ   ಶುದ್ಧ ಕುಡಿಯುವ ನೀರು, ಮೂಲಸೌಕರ್ಯ ಒದಗಿಸಲು‌ ಸೂಚನೆ
ಬೆಳಗಾವಿ,ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ತಕ್ಷಣವೇ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಗೆ ಮಂಗಳವಾರ(ಆ.20) ಭೇಟಿ ನೀಡಿದ ಅವರು, ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ಸರಿಪಡಿಸಬೇಕು; ಹೊರ ರೋಗಿಗಳ ವಿಭಾಗದಲ್ಲಿ ಶೌಚಾಲಯ ವ್ಯವಸ್ಥೆ ಒದಗಿಸಬೇಕು; ಕರ್ತವ್ಯನಿರತ ವೈದ್ಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿಯನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಇದಲ್ಲದೇ ಮಹಿಳೆಯರು, ಮಕ್ಕಳ ಭದ್ರತೆ‌ ದೃಷ್ಟಿಯಿಂದ ಅಗತ್ಯವಿರುವ ಎಲ್ಲ ಕಡೆಗಳಲ್ಲೂ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಅಳವಡಿಸುವಂತೆ ಡಾ.ನಾಗಲಕ್ಷ್ಮೀ ತಿಳಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಿಮ್ಸ್‌ ನಿರ್ದೇಶಕರಾದ ಅಶೋಕ ಶೆಟ್ಟಿ ಅವರು, ಸಂಸ್ಥೆಯ ಕುರಿತು ಮಾಹಿತಿಯನ್ನು ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ‌ ಡಾ.ಮಹೇಶ್ ಕೋಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!