ಆಂಧ್ರಪ್ರದೇಶದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಕ್ಕಿದೆ. ಇದರ ಬೆನ್ನಲ್ಲೆ ಇಂದು ನಾಲ್ಕನೇ ಬಾರಿಗೆ ಸಿಎಂ ಆಗಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಇದೇ ವೇಳೆ ಪವನ್ ಕಲ್ಯಾಣ್ ಅವರು ನಾಯ್ಡು ಅವರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕಾರಿಸಿದರು
ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಹೇಳುವ ಮೂಲಕ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದರು. ವಿಜಯವಾಡದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಭಾಗವಹಿಸಿದ್ದಾರೆ.
ಇದೇ ವೇಳೆ 25 ಜನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಚಂದ್ರಬಾಬು ನಾಯ್ಡು ಅವರಿಗೆ ಮೋದಿ ಅವರು ಪುಷ್ಪಗುಚ್ಚವನ್ನು ನೀಡಿ ಗೌರವಿಸಿದರು. ಅಲ್ಲದೆ ಪರಸ್ಪರ ಅಪ್ಪಿಕೊಂಡರು.
ಆಂಧ್ರಪ್ರದೇಶದಲ್ಲಿ ಟಿಡಿಪಿ-22, ಜೆಎಸ್‌ಪಿ-3, ಬಿಜೆಪಿ-1 ಸ್ಥಾನದಲ್ಲಿ ಜಯ ಗಳಿಸಿದೆ. ಇದರ ಬೆನ್ನಲ್ಲೆ ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ, ಜೊತೆಗೆ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಚಿರಾಗ್ ಪಾಸ್ವಾನ್, ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವು ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದಲ್ಲದೆ ನಟರಾದ ರಜನಿಕಾಂತ್ ಮತ್ತು ಚಿರಂಜೀವಿ ಕೂಡ ಪ್ರಮಾಣವಚನ ಸಮಾರಂಭದಲ್ಲಿ ಕಾಣಿಸಿಕೊಂಡರು.