ಬೆಂಗಳೂರು, 17 : ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ ಹಾಗೂ ಬಿಡಿಎಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆದಿದ್ದು, ಬೆಂಗಳೂರಿನ ಸಂಚಾರ ದಟ್ಟಣೆ ಪೆರಿಪೆರಲ್ ರಿಂಗ್ ರಸ್ತೆ, ಸೈಡರ್ ಪಾದಚಾರಿ ಮಾರ್ಗಗಳ ಆಧುನೀಕರಣ, ಮಳೆ ನೀರು ಕೊಯ್ದು, ಬೆಂಗಳೂರಿನ ಹಸಿರೀಕರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಮಾರ್ಗೋಪಾಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಗಳು ನಡೆದು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಬೆಂಗಳೂರನ್ನು ಅಭಿವೃದ್ಧಿ ಪಡಿಸುವ ಚರ್ಚೆಯೂ ನಡೆಯಿತು. ಸಭೆಯ ಆರಂಭದಲ್ಲಿ ಬೆಂಗಳೂರಿನ
ಸಮಸ್ಯೆಗಳು, ಅವುಗಳ ಪರಿಹಾರದ ಬಗ್ಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ ವಿವರಗಳನ್ನು ನೀಡಿದರು.ಇಂದಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ,ಕೆ.ಜೆ ಜಾರ್ಜ್, ದಿನೇಶ್ ಗುಂಡೂರಾವ್,ಬಿಡಿಎ ಅಧ್ಯಕ್ಷ ಎನ್.ಎ ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಅಪರಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿಮುಖ್ಯಕಾರ್ಯದರ್ಶಿ ಉಮಾಶಂಕರ್,ಇಲಾಖೆ ಎಲ್.ಕೆ ಅತೀಕ್,ಅಪರ ಇಂಧನ ಹಾಗೂ ಮೂಲಸೌಕರ್ಯ ಇಲಾಖೆ ಅಪರಮುಖ್ಯಕಾರ್ಯದರ್ಶಿ ಗೌರವ್‌ಗುಪ್ತ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್,ಬಿಡಿಎಆಯುಕ್ತ ಜಯರಾಂ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.