ರಾಯಚೂರು,ಜೂ.06ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಜೂ.5 ರಂದು ಟಾಸ್ಕ್ ಪೋರ್ಸ್ ಸಮಿತಿ ತಂಡದೊ0ದಿಗೆ ಹೋಟೆಲ್ ಸಾಮ್ರಾಟ್, ಆಂದ್ರ ಭೋಜನ ಮತ್ತು ರೊಟ್ಟಿ ಕೇಂದ್ರ, ಸರಕಾರಿ ಬಾಲಕೀಯರ ಪದವಿ ಪೂರ್ವ ಕಾಲೇಜ್ ಎದುರುಗಡೆ, ರೈಲ್ವೆ ಸ್ಟೇಷನ್ ರಸ್ತೆ. ರಾಯಚೂರುನಲ್ಲಿ ಹೋಗಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ ಕಾಯ್ದೆ-2016 ರ ಅಡಿಯಲ್ಲಿ ತಪಾಸಣೆ/ದಾಳಿ ನಡೆಸಿದಾಗ ಸದರಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ, ಬಾಲಕರ ಬಾಲಮಂದಿರ ರಾಯಚೂರುರವರಿಗೆ ಒಪ್ಪಿಸಲಾಗಿರುತ್ತದೆ. ಮಗುವನ್ನು ಕೆಲಸಕ್ಕೆ ನೇಮಕಮಾಡಿಕೊಂಡಿದ್ದ ªಹೋಟೆಲ್ ಸಾಮ್ರಾಟ್, ಆಂದ್ರ ಭೋಜನ ಮತ್ತು ರೊಟ್ಟಿ ಕೇಂದ್ರದ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪಶ್ಚಿಮ ಪೊಲೀಸ್ ಠಾಣೆ, ರಾಯಚೂರುನಲ್ಲಿ ಪ್ರಕರಣ ದಾಖಲು ಮಾಡಲಾಗಿರುತ್ತದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
ದಾಳಿಯ ತಂಡದಲ್ಲಿ ಯೋಜನಾ ನಿರ್ದೇಶಕರಾದ ಮಂಜುನಾಥರೆಡ್ಡಿ, ತಾಲೂಕ ದೈಹಿಕ ಶಿಕ್ಷಣಾಧಿಕಾರಿ ಹುಸೇನ್‌ಬಾಷಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹನುಮೇಶ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ದಿನೇಶ ಹಾಗೂ ಮಕ್ಕಳ ಸಹಾಯವಾಣಿ ಘಟಕ ಮಹೇಶ, ತಾಯರಾಜ್ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಹುಸೇನ ನಾಯ್ಕ ರವರು ಪಾಲ್ಗೊಂಡಿದ್ದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016 ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ ರೂ. 50,000 ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಕಾರಣ ಮಕ್ಕಳನ್ನು ದುಡಿಸಿಕೊಳ್ಳಬಾರದೆಂದು ಜಿಲ್ಲಾ ಬಾಲಕಾರ್ಮಿಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.