ಚಿತ್ರದುರ್ಗ
ಚಿತ್ರದುರ್ಗ ನಗರದ ಶ್ರೀ ಪಾರ್ಶ್ವನಾಥ ಪ್ರೌಢಶಾಲೆಯಲ್ಲಿ ಗುರುವಾರ ಬಾಲ್ಯ ವಿವಾಹ ಕುರಿತಾದ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು.
ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪಾವನ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಮತ್ತು ಶಾಲಾ ಶಿಕ್ಷಕರ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಮತ್ತು ಬಾಲ್ಯ ವಿವಾಹದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಹಾಗೂ ಮಕ್ಕಳ ಕಳ್ಳ ಸಾಗಾಣಿಕೆ ಬಗ್ಗೆ ಅರಿವು ಮೂಡಿಸಿದರು.
ಚಿತ್ರದುರ್ಗ ನಗರ ಪೊಲೀಸ್ ಠಾಣೆ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಗಾದ್ರಿಲಿಂಗಪ್ಪ ಮಾತನಾಡಿ, ಹದಿಹರೆಯದ ಮಕ್ಕಳಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಮತ್ತು ಅವುಗಳು ಉಂಟುಮಾಡುವoತಹ ಪ್ರಚೋದನೆಗಳ ಬಗ್ಗೆ ವಿವರವಾಗಿ ಮಕ್ಕಳಿಗೆ ತಿಳಿಸಿದರು.
ಬಾಲ್ಯ ವಿವಾಹ ಆದ ಸಂದರ್ಭದಲ್ಲಿ ಪೊಲೀಸ ಇಲಾಖೆಯನ್ನು ಸಂಪರ್ಕಿಸಲು ಮಕ್ಕಳಿಗೆ ಮಾಹಿತಿ ನೀಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಬಾಲ್ಯ ವಿವಾಹ ನಡೆದ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಮತ್ತು 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಮಕ್ಕಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಜಿ ಹರೀಶ್, ರವಿ, ಶಾಲೆಯ ಮುಖ್ಯ ಶಿಕ್ಷಕಿ ನಸೀಮಾ ಸೇರಿದಂತೆ ಶಾಲೆಯ ಶಿಕ್ಷಕರು, ನಗರಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಜಿಲ್ಲಾ ಮಿಷನ್ ಸಂಯೋಜಕ ಬಿ.ವಿನಯ್ ಇದ್ದರು.