ಚಿತ್ರದುರ್ಗ.19:
ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿವಿಧ ಭಾಗಗಳಲ್ಲಿ ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರ/ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು 2025ರ ಜನವರಿ 01ರ ಸಂಜೆ 5 ಗಂಟೆಯ ಒಳಗಾಗಿ ಅರ್ಜಿಗಳನ್ನು ಸಂಸ್ಥೆಗೆ ತಲುಪಿಸುವುದು. ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು.
ಅರ್ಹತೆ, ಮೀಸಲಾತಿ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ https://cmcrichitradurga.karnataka.gov.in ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೊಧನಾ ಸಂಸ್ಥೆಯ ನಿರ್ದೇಶಕ ಡಾ.ಯುವರಾಜ್ ತಿಳಿಸಿದ್ದಾರೆ.
“ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳ ಒಕ್ಕೊರಲ ಒತ್ತಾಯ” “ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ” ಬೆಂ.ಗ್ರಾ.ಜಿಲ್ಲೆ, ಡಿ.18(ಕ.ವಾ):- ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು. ■ ಸಂಘಟನೆಗಳ ಪ್ರಮುಖ ಬೇಡಿಕೆಗಳು:- – ಭ್ರಷ್ಟಾಚಾರ ರಹಿತ ಆಡಳಿತ – ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು – ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು – ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ – ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು – ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ – ಸಾಗುವಳಿ ಚೀಟಿ ವಿತರಣೆ – ಸರ್ಕಾರಿ ಜಾಗಗಳ ಒತ್ತುವರಿ ತೆರವು – ನಿವೇಶನ, ವಸತಿ ಹಂಚಿಕೆ – ಬಗರ್ ಹುಕುಂ ಜಮೀನು ವಿವಾದ – ಕಡತಗಳ ಶೀಘ್ರ ವಿಲೇವಾರಿ – ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ – ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು – ಪೌತಿ ಖಾತೆ, ಪೋಡಿ ಇತ್ಯರ್ಥ ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು. ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು. ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.