ಶಿವಮೊಗ್ಗ, ಆ.07,
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿoಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯ ವತಿಯಿಂದ ನಡೆಸಲಾಗುವು ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಅವಧಿಯನ್ನು 01.09.2024 ವರೆಗೆ ವಿಸ್ತರಿಸಲಾಗಿದೆ.
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಿಐಪಿಇಟಿ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬ0ಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪ್ಲೋಮಾ ದ ಕೊನೆಯ ಸೆಮಿಸ್ಟರ್ ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ(ಡಿಪಿಟಿ)– 3 ವರ್ಷಗಳು, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ(ಡಿಪಿಎಚಿಟಿ)– 3 ವರ್ಷಗಳು, ಕೋರ್ಸ್ ಗಳಿಗೆ ಪ್ರವೇಶ ಪಡೆಯಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ.(ವಿಜ್ಞಾನ), ಐಟಿಐ ಪರೀಕ್ಷೆಯಲ್ಲಿ 35% & ಮೇಲ್ಪಟ್ಟ ಅಂಕ ಪಡೆದು ತೇರ್ಗಡೆಯಾದವರು ದಿನಾಂಕ 01.09.2024 ರ ಒಳಗೆ ನೇರ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ Website: www.cipet.gov.in ಹಾಗೂ ಸಿಐಪಿಇಟಿ, 437/ಂ, ಹೆಬ್ಬಾಳ ಇಂಡಸ್ಟಿçಯಲ್ ಏರಿಯಾ ಮೈಸೂರು -570016 ಫೋ.ನಂ 0821-2510618/ 9480253024/ 9791431827 ನ್ನು ಸಂಪರ್ಕಿಸಬಹುದೆAದು ಸಂಸ್ಥೆಯ ಪ್ರಧಾನ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.