ರಾಯಚೂರು ಜುಲೈ 07 : ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜುಲೈ 07ರ ಸೋಮವಾರ ದಂದು ನಗರದ ಜಿಲ್ಲಾ ಪಂಚಾಯಿತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜಲ ಜೀವನ ಮಿಷನ್ ಯೋಜನೆ ಕಾಮಗಾರಿಗಳ ಸಮಗ್ರ ಅನುಷ್ಠಾನಕ್ಕಾಗಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು. ಸಂಬAಧಪಟ್ಟ ಅಧಿಕಾರಿಗಳು ಖುದ್ದಾಗಿ ಕಾಲಕಾಲಕ್ಕೆ ಸ್ಥಳ ಪರಿಶೀಲನೆ ಮಾಡಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಗೆ ಸುಮಾರು 84141.25 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು. ಕೆಲಸ ಸರಿಯಾಗಿ ಮಾಡಬೇಕೆಂದು ಸಂಬAಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಬೇಕೆಂದರು.
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ 5 ತಾಲೂಕಿನಲ್ಲಿ ಬ್ಯಾಚ್ 1, 2, 3 ಮತ್ತು 4 ರಲ್ಲಿ ಒಟ್ಟು 1223 ಕಾಮಗಾರಿಗಳನ್ನು ಕೈಗೊಂಡಿದ್ದು, ಇದರಲ್ಲಿ 832 ಕಾಮಗಾರಿಗಳು ಪೂರ್ಣಗೊಂಡಿದ್ದು, 387 ಕಾಮಗಾರಿಗಳು ಪ್ರಗತಿಯಲ್ಲಿದ್ದು, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಅಂಗನಾಡಿಗಳಿಗೆ ಜಲಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಯಾದ-ಯಾವ ಶಾಲೆಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಅವನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಹಜರು ಮಾಡಿ ವರದಿ ನೀಡಬೇಕು. ಅಂಗನವಾಡಿಗಳಲ್ಲಿ ಬಳಸಲಾಗುವ ನೀರನ್ನು ಸುಯಾಗಿದೆಯೇ ಇಲ್ಲವೇ ಎಂಬುವುದನ್ನು ಆರೋಗನಿ ಇಲಾಖೆಯಿಂದ ಪರೀಕ್ಷೆ ನಡೆಸಬೇಕು. ಮುಖ್ಯವಾಗಿ ಕುಡಿಯುವ ನೀರು ಹಾಗೂ ಆಡುಗೆಗೆ ಬಳಸುವ ನೀರನ್ನು ಸರಿಯಾಗಿ ಪರೀಕ್ಷೆ ಮಾಡಲೇಬೇಕು ಎಂದು ತಿಳಿಸಿದರು.
ಪ್ರತಿ ದಿನವೂ ಆರೋಗ್ಯ ಇಲಾಖೆಯಿಂದ ನೀರಿನ ಪರೀಕ್ಷಾ ವರದಿಯನ್ನು ಪಡೆಯಲಾಗುತ್ತಿದೆ. ಆಯಾ ಗ್ರಾಮಗಳ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿAದ ಪಡೆಯಲಾಗುತ್ತದೆ. ಜೊತೆಗೆ ಡೆಂಗ್ಯೂ ಮಾಹಿತಿಯನ್ನೂ ಪಡೆಯಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ನಾಗೇಶ್, ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಗಣೇಶ್, ಜಿಲ್ಲಾ ಗಿರಿಜನ ಕಲ್ಯಾಣಾಧಿಕಾರಿ ಮಲ್ಲಯ್ಯ ಕೆ., ರಾಯಚೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪುಷ್ಪಲತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು