Ad image

ವಸತಿ ಶಾಲೆಗಳ ಪ್ರವೇಶಕ್ಕೆ ಜೂನ್ 4 & 5 ರಂದು ಕೌನ್ಸೆಲಿಂಗ್

Vijayanagara Vani
ಕೊಪ್ಪಳ ಜೂನ್ 02 : 2025-26ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ/ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಜೂನ್ 04 ಮತ್ತು 05 ರಂದು ಕೌನ್ಸೆಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುವುದು.
1:1 ಮೆರಿಟ್‌ನಲ್ಲಿ ಅರ್ಹತೆ ಪಡೆದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಟಣಕನಕಲ್‌ನಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಜೂನ್ 04 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಬಾಲಕರಿಗೆ ಹಾಗೂ ಮಧ್ಯಾಹ್ನ 03 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಬಾಲಕಿಯರಿಗೆ ಕೌನ್ಸೆಲಿಂಗ್ ನಡೆಯಲಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಜೂನ್ 05 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ಬಾಲಕರಿಗೆ ಹಾಗೂ ಮಧ್ಯಾಹ್ನ 03 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಬಾಲಕಿಯರಿಗೆ ಕೌನ್ಸೆಲಿಂಗ್ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ತಪ್ಪದೇ ಕೌನ್ಸೆಲಿಂಗ್‌ಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ವಸತಿ ಶಾಲೆ, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ 08539-225070, 8088892549, ಗಂಗಾವತಿ 9972524670, ಕುಷ್ಟಗಿ 8861610578, ಯಲಬುರ್ಗಾ 9620522537 ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಛೇರಿಗಳಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";