Ad image

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

Vijayanagara Vani
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ರಾಯಚೂರು,ಆ.03 ಇಲ್ಲಿಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾ0ಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2.00 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು, 1.00ಲಕ್ಷ ರೂ.ಗಳವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ 20,000/- ರೂ.ಗಳ ಸಹಾಯಧನ ಹಾಗೂ 1.01ಲಕ್ಷ ರೂ.ದಿಂದ 2.00ಲಕ್ಷ ರೂ.ಗಳವರೆಗೆ ಶೇ.15 ರಷ್ಟು ಕನಿಷ್ಠ ರೂ.20,000/-ಗಳವರೆಗೆ ಗರಿಷ್ಠ ರೂ.30,000/- ಸಹಾಯಧನ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯಬಹುದಾಗಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000/- ರೂ.ಗಳು ಪಟ್ಟಣ ಪ್ರದೇಶದವರಿಗೆ 1,20,000/- ರೂ.ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಗಂಗಾ ಕಲ್ಯಾಣ ನೀರಾವರಿ ಯೋಜನೆ: ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ 4.75 ಲಕ್ಷ ರೂ. ಇದರಲ್ಲಿ ವಿದ್ಯುದ್ಧೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000/- ರೂ.ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.

ಇನ್ನುಳಿದ ಜಿಲ್ಲೆಗಳಿಗೆ 3.75 ಲಕ್ಷ ರೂ.ಗಳು ಇದರಲ್ಲಿ ವಿದ್ಯುದ್ಧೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000/- ರೂ.ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000/- ರೂ.ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

ಅರಿವು-ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಡಿ ಅಇಖಿ ಮತ್ತು ಓಇಇಖಿ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿ0ಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1.00 ಲಕ್ಷರೂ.ಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ 4.00 ಲಕ್ಷ ರೂ.ಗಳಿಂದ ರೂ 5.00 ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು 3.50 ಲಕ್ಷ ರೂ.ಗಳ ಮಿತಿಯಲ್ಲಿರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ: ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟ್ರರ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿ0ಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್/ ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8.00ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. ಕಿS Woಡಿಟಜ ಖಚಿಟಿಞiಟಿg 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 10.00 ಲಕ್ಷ ಹಾಗೂ ಪೂರ್ಣ ಕೋರ್ಸ್ನ ಅವಧಿಗೆ ರೂ.20.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.

ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (ಔಜಿಜಿeಡಿ ಐeಣಣeಡಿ) ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.

ಸ್ವಾವಲಂಬಿ ಸಾರಥಿ ಯೋಜನೆ: ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ಗಳಿ0ದ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಟ 3.00 ಲಕ ರೂ.್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಅಲ್ಲದೆ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000/- ರೂ.ಗಳು ಪಟ್ಟಣ ಪ್ರದೇಶದವರಿಗೆ 1,20,000/- ರೂ.ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ಸ್ವಯಂ ಉದ್ಯೋಗ ಸಾಲ ಯೋಜನೆ: ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು ಅಥವಾ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ 1.00 ಲಕ್ಷ ರೂ.ಗಳ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್ನಿAದ ಸಾಲ ಪಡೆಯುವ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ: ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC, KGTTI, ATDC, VUT  ಗಳ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ/ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಿ ಮುಖಿಗಳನ್ನಾಗಿಸುವುದು.

ಅರ್ಹತೆಗಳು: 10ನೇತರಗತಿ/ ದ್ವಿತೀಯ ಪಿ.ಯು.ಸಿ./ ಡಿಪ್ಲೋಮ/ ಪದವಿ/ ಇಂಜಿನಿಯರಿ0ಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು.

ಅರ್ಜಿದಾರರ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-2ಎ,3ಎ ಮತ್ತು 3ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ 8.00 ಲಕ್ಷ ರೂ.ಗಳಿಗಿಂತ ಕಡಿಮೆ ಇರಬೇಕು. ಅರ್ಜಿದಾರರುhttps://www.kaushalkar.com ಜಾಲತಾಣದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೊಲಿಗೆ ಯಂತ್ರ ವಿತರಣೆ ಯೋಜನೆ: ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000/- ರೂ.ಗಳು ಪಟ್ಟಣ ಪ್ರದೇಶದವರಿಗೆ 1,20,000/- ರೂ.ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾ0ಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ಞhttp://sevasindhu.karnataka.gov.in/ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇದೇ 2024ರ ಆಗಸ್ಟ್ 31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ: 08532-250440ಗೆ ಸಂಪರ್ಕಿಸುವ0ತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";