Ad image

ಸಂಡೂರು ವಿಧಾನಸಭೆ ಉಪಚುನಾವಣೆ ಮತದಾನ ಕೊನೆಗೊಳ್ಳುವ 48 ಗಂಟೆಗಳ ಕಾಲ ಸಂಡೂರು ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಡಿಸಿ ಮಿಶ್ರಾ ಆದೇಶ

Vijayanagara Vani
ಸಂಡೂರು ವಿಧಾನಸಭೆ ಉಪಚುನಾವಣೆ  ಮತದಾನ ಕೊನೆಗೊಳ್ಳುವ 48 ಗಂಟೆಗಳ ಕಾಲ ಸಂಡೂರು ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಿ ಡಿಸಿ ಮಿಶ್ರಾ ಆದೇಶ

ಬಳ್ಳಾರಿ,ನ.06

- Advertisement -
Ad imageAd image

ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.13 ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ 48 ಗಂಟೆಗಳ ಅಂದರೆ ನ.11 ರ ಸಂಜೆ 06 ಗಂಟೆಯಿAದ ನ.14 ರ ಸಂಜೆ 06 ಗಂಟೆಯವರೆಗೆ ಸಂಡೂರು ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ವಿವಿಧ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಷರತ್ತುಗಳು:
ಸಂಡೂರು ವಿಧಾನಸಭಾ ಕ್ಷೇತ್ರದ (95) ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಮತದಾನ ಮುಕ್ತಾಯವಾಗುವವರೆಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮನೆ ಮನೆ ಪ್ರಚಾರವನ್ನು ಮಾಡಿಕೊಳ್ಳಬಹುದು.
ಚುನಾವಣಾ ಅಭ್ಯರ್ಥಿ ಅಥವಾ ಬೆಂಬಲಿಗರು ಸೇರಿ 05 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತçವನ್ನು ತೆಗೆದುಕೊಂಡು ಹೋಗುವುದು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಭಂದಿಸಿದೆ.
ಕಲ್ಲುಗಳನ್ನು, ಕ್ಷಾರ ಪಧಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಸ್ಥಳ ನಿಬಂರ್ಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ..
ಮತಗಟ್ಟೆ ಕೇಂದ್ರಗಳ ಸುತ್ತಲಿನ 100 ಮೀ. ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ. ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ನೀಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಮತ್ತು ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲೀ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತçಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತçಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ನಿಯಮಗಳನ್ನು ಪಾಲಿಸುವುದು.
ಮತಗಟ್ಟೆ ಕೇಂದ್ರಗಳ ಸುತ್ತಲೂ 100 ಮೀಟರ್ ಅಂತರದಲ್ಲಿ (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ/ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ ಸಿಬ್ಬಂದಿಗಳು ಹೊರತುಪಡಿಸಿ) ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟಾçನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
ಮತಗಟ್ಟೆ ಕೇಂದ್ರಗಳ ಸುತ್ತಲೂ 100 ಮೀ. ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬAಧಿಸಿದ ಪೋಸ್ಟರ್, ಬ್ಯಾನರ್, ಧ್ವನಿ ವರ್ಧಕ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ.
ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳನ್ನು ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕು.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ಕಲಂ 223 ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಮತ್ತು ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ

Share This Article
error: Content is protected !!
";