Ad image

ಮೇ 26 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

Vijayanagara Vani
ಮೇ 26 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ
ಬಳ್ಳಾರಿ,ಮೇ 23:
ಜಿಲ್ಲೆಯಾದ್ಯಂತ 24 ಪರೀಕ್ಷಾ ಕೇಂದ್ರಗಳಲ್ಲಿ ಮೇ 26 ರಿಂದ ಜೂ.02 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರ ಅಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಿ ಆದೇಶಿಸಿದ್ದಾರೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";