ಕೊಪ್ಪಳ ಜೂನ್ 21 : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿರುವ ಕೊಪ್ಪಳ ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ವರ್ಗಾವಣೆಯಾಗಿರುವ ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರಿಗೆ ಕೊಪ್ಪಳ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ನಿರ್ಗಮಿತ ಡಿಸಿ ಮತ್ತು ಜಿ.ಪಂ ಸಿಇಓ ಅವರ ಕಾರ್ಯವೈಖರಿ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ಜಿ.ಪಂ ಉಪಕಾರ್ಯದರ್ಶಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು, ತಹಶಿಲ್ದಾರರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
*ನೂತನ ಡಿಸಿ ಮತ್ತು ಸಿಇಓ ಅವರಿಗೆ ಸನ್ಮಾನ:* ಕೊಪ್ಪಳ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಸುರೇಶ ಬಿ. ಇಟ್ನಾಳ ಹಾಗೂ ನೂತನ ಜಿ.ಪಂ ಸಿಇಓ ಆಗಿ ಆಗಮಿಸಿರುವ ವರ್ಣಿತ್ ನೇಗಿ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಯೋಜನಾ ನಿರ್ದೇಶಕ ಪ್ರಕಾಶ ವಿ., ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಐ.ಎಫ್.ಎಸ್ ಅಧಿಕಾರಿ ಕಾವ್ಯ ಚತುರ್ವೇದಿ ಹಾಗೂ ಜಿಲ್ಲಾಧಿಕಾರಿಗಳ ಶ್ರೀಮತಿಯವರು ಸೇರಿದಂತೆ ಮತ್ತಿತರರಿದ್ದರು.
ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಕಾರ್ಯಕ್ರಮ ನಿರೂಪಿಸಿದರು.