ಬಳ್ಳಾರಿ,ಜು.01
ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
*ರಾಜ್ಯವಲಯ ಯೋಜನೆಗಳು:*
ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆಯಡಿ ಸಹಾಯಧನ ನೆರವು, ಮೀನುಮರಿ ಖರೀದಿಸಲು ನೆರವು ಯೋಜನೆ, ಕೆರೆ, ಜಲಾಶಯಗಳ ಅಂಚಿನ ಕೊಳೆಗಳಲ್ಲಿ ಮೀನುಮರಿ ಪಾಲನೆಗೆ ಸಹಾಯಧನ ನೆರವು ನೀಡಲಾಗುವುದು.
ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ವಿಶ್ವನಾಥಯ್ಯ-ಮೊ.9740162401 ಮತ್ತು ಸಂಡೂರು ವ್ಯಾಪ್ತಿಗೆ ಜಿ.ಶಾಂತಕುಮಾರ್-ಮೊ.9620177588 ಇವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.