Ad image

ಹಿ0ದುಳಿದ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Vijayanagara Vani
ಹಿ0ದುಳಿದ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಮಾ.13
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.30 ರ ವರೆಗೆ ವಿಸ್ತರಿಸಲಾಗಿದೆ.
ಕೋರ್ಸ್ ಗಳ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾಗಿರುವ ಕಾರಣ ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ಬಂದ ಕಾರಣ ನಿಗದಿಪಡಿಸಿದ ಅವಧಿಯೊಳಗೆ ಅರ್ಜಿಗಳು ಸಲ್ಲಿಕೆಯಾಗದ ಕಾರಣ ಅವಧಿ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್ ಲೈನ್ ವೆಬ್ ಸೈಟ್ ವಿಳಾಸ https://ssp.postmatric.karnataka.gov.in/ ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————

Share This Article
error: Content is protected !!
";