ವ್ಯಸನ ಮುಕ್ತ ದಿನಾಚರಣೆ ಮೂಲಕ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ

Vijayanagara Vani
ವ್ಯಸನ ಮುಕ್ತ ದಿನಾಚರಣೆ ಮೂಲಕ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ
ಕಾರವಾರ. ಜು.30 – ಮಾದಕ ವ್ಯಸನಗಳ ದುಷ್ಪರಿಣಾಮಗಳ ಕುರಿತಂತೆ ಸಾರ್ವಜನಿಕರಿಗೆ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸುವ ವ್ಯಸನ ಮುಕ್ತ ದಿನಾಚರಣೆ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಿ, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ನಿರ್ದೇಶನ ನೀಡಿದರು.
ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ, ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 1 ರಂದು ನಡೆಯುವ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಅವರು, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತಂತೆ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿ, ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವಂತೆ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸುವಂತೆ ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ಮನೋವೈದ್ಯರಿಂದ ಉಪನ್ಯಾಸ ಹಾಗೂ ಮದ್ಯ ಮತ್ತು ಮಾದಕ ವ್ಯಸನಗಳಿಂದ ಮುಕ್ತರಾದವರನ್ನು ಅಭಿನಂದನೆ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವೀಡಿಯೋ ಕಾನ್ಪ್ರೆನ್ಸ್ ಮೂಲಕ ಎಲ್ಲಾ ತಹಶೀಲ್ದಾರ್ಗಳು ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!