Ad image

ಉಪ ಲೋಕಾಯುಕ್ತ ಬಿ.ವೀರಪ್ಪ ಅವರಿಗೆ  ಖುದ್ದು ಭೇಟಿ ಮಾಡಿ ದೂರು ಸಲ್ಲಿಸಲು ಅವಕಾಶ

Vijayanagara Vani

ರಾಯಚೂರು ಆಗಸ್ಟ್ 19ಆಗಸ್ಟ್ 28 ರಿಂದ 30 ರವರೆಗೆ ರಾಯಚೂರ ಜಿಲ್ಲೆಯಲ್ಲಿ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪ ಲೋಕಾಯುಕ್ತರಾದ ಬಿ.ವೀರಪ್ಪ ಅವರು ಉಪಸ್ಥಿತರಲಿದ್ದು ಸಾರ್ವಜನಿಕರು ಅವರಿಗೆ ನೇರವಾಗಿ ಭೇಟಿ ಮಾಡಿ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಗಸ್ಟ್ 29ರ ಬೆಳಿಗ್ಗೆ 10 ಗಂಟೆಗೆ ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಜಿಲ್ಲಾ ಶಿಬಿರ ಕೈಗೊಳ್ಳಲಿದ್ದು, ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ ಅಥವಾ ನೌಕರರಿಂದ ತಮಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ ಅಥವಾ ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿ ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಅದೆ ರೀತಿ ಆಗಸ್ಟ್ 30ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.45 ಗಂಟೆಯೆರವರೆಗೆ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಗೌರವಾನ್ವಿತ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಲ್ಲಿ ಕಚೇರಿಯಿಂದ ನೋಟಿಸ್ ಕಳುಹಿಸಿರುವ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಿದ್ದಾರೆ. ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ರಾಯಚೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸತೀಶ್ ಎಸ್ ಚಿಟಗುಬ್ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";