Ad image

ಪಡಿತರ ಚೀಟಿಗಳ ಫಲಾನುಭವಿಗಳಿಗೆ ಹಣದ ಬದಲಿಗೆ ಹೆಚ್ಚುವರಿ 05 ಕೆ.ಜಿ ಅಕ್ಕಿ ವಿತರಣೆ

Vijayanagara Vani

ರಾಯಚೂರು ಜೂನ್ 19 : ಜೂನ್ 2025 ರ ಮಾಹೆಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ರಾಯಚೂರು ಜಿಲ್ಲೆಯ ಕೇಂದ್ರ ವ್ಯಾಪ್ತಿಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ ಜೋಳ ಹಾಗೂ ಕೇಂದ್ರ ವ್ಯಾಪ್ತಿಯ ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 03 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 02 ಕೆ.ಜಿ ಜೋಳ ಮತ್ತು ರಾಜ್ಯ ವ್ಯಾಪ್ತಿಯ ಪಡಿತರ ಚೀಟಿದಾರರಿಗೆ 05 ಕೆ.ಜಿ ಸಾರವರ್ಧಿತ ಅಕ್ಕಿ ಇದರ ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಪ್ರಸ್ತುತ ಜಿಲ್ಲೆಯಲ್ಲಿರುವ ಕೇಂದ್ರ ಮತ್ತು ರಾಜ್ಯ ವ್ಯಾಪ್ತಿಯ ಅಂತ್ಯೋದಯ(ಎಎವೈ) ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಗಳ ಫಲಾನುಭವಿಗಳಿಗೆ ಹಣದ ಬದಲಿಗೆ ಹೆಚ್ಚುವರಿಯಾಗಿ 05 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಏಕ ಸದಸ್ಯ, ದ್ವಿ ಸದಸ್ಯ ಮತ್ತು ತ್ರಿ ಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕಿಂತ ಹೆಚ್ಚಿನ ಸದಸ್ಯರುಳ್ಳ ಅಂತ್ಯೋದಯ(ಎಎವೈ) ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು.
ಒಂದು ರಾಷ್ಟç ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬAದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ

Share This Article
error: Content is protected !!
";